ಕರ್ನಾಟಕ ಸೇರಿ ದೇಶದ ಹಲವೆಡೆ PFI ಕಚೇರಿಗಳ ಮೇಲೆ NIA ದಾಳಿ 

1 week ago 26

ದೆಹಲಿ: ರಾಷ್ಟ್ರೀಯ ತನಿಖಾ ಸಂಸ್ಥೆ ಬೆಳ್ಳಂಬೆಳಗ್ಗೆ ದೇಶದ ಹಲವು ರಾಜ್ಯಗಳಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಸ್ಥೆಗೆ ಸಂಬಂಧಿಸಿದ ನಿವೇಶನಗಳ ಹಾಗೂ ಮುಖಂಡರ ಮನೆಗಳ ಮೇಲೆ ದಾಳಿ ನಡೆಸಿದೆ.

ಕರ್ನಾಟಕ ತಮಿಳುನಾಡು, ಉತ್ತರ ಪ್ರದೇಶ, ಕೇರಳ, ಆಂಧ್ರಪ್ರದೇಶ, ತೆಲಂಗಾಣ, ಸೇರಿದಂತೆ ಇತರ ರಾಜ್ಯಗಳಲ್ಲಿರುವ ಎಸ್​ಡಿಪಿಐ ಕಚೇರಿಗಳ ಮೇಲೆ ಎನ್ಐಎ ದಾಳಿ ನಡೆಸಿದೆ.

ಇನ್ನೂ, ಮಂಗಳೂರಿನ ಪಿಎಫ್​ಐ ಕಚೇರಿ ಮೇಲೆ ಇಂದು ಬೆಳಗಿನ ಜಾವ 3.30ರ ರ ಸುಮಾರಿಗೆ ಎನ್ಐಎ ದಾಳಿ ನಡೆಸಿದೆ. ಶಸ್ತ್ರಸಜ್ಜಿತ ಕೇಂದ್ರೀಯ ಪಡೆಗಳೊಂದಿಗೆ ಸ್ಥಳಕ್ಕೆ ಬಂದಿರುವ ಅಧಿಕಾರಿಗಳು ಕಚೇರಿಗೆ ಪ್ರವೇಶಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

ಹಿಂದೂ ಸಂಘಟನೆ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣವನ್ನು ​ಎನ್ಐಎ ತನಿಖೆ ನಡೆಸುತ್ತಿದೆ. ಇದಕ್ಕಾಗಿ ಮಂಗಳೂರಿನ ಸ್ಥಳೀಯ ಪೊಲೀಸರು ಸಹ ರಸ್ತೆಯಲ್ಲಿ ಉಪಸ್ಥಿತರಿದ್ದು, ಭದ್ರತೆ ಒದಗಿಸಿದ್ದಾರೆ.

ಈ ವೇಳೆ ಗೋ ಬ್ಯಾಕ್ ಎನ್‌ಐಎ ಎಂದು ಪಿಎಫ್‌ಐ ಕಾರ್ಯಕರ್ತರು ಘೋಷಣೆ ಕೂಗಿ ಪ್ರತಿಭಟನೆ ನಡೆಸಿದ್ದು, ಎನ್‌ಐಎ ದಾಳಿ ಹಿನ್ನಲೆಯಲ್ಲಿ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ. ಪ್ರತಿಭಟನೆ ನಡೆಸಿ ಹೈಡ್ರಾಮಾ ಮಾಡಿದ ಹಲವು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

Read Entire Article