ನಾಳೆ ಪ್ರಧಾನಿ ಮೋದಿ ಹುಟ್ಟು ಹಬ್ಬ : ಪ್ರತಿ ಮಗುವಿಗೆ ಚಿನ್ನದ ಉಂಗುರ, 720 ಕೆಜಿ ಮೀನು

2 weeks ago 33

ತಮಿಳುನಾಡು : ಭಾರತೀಯ ಜನತಾ ಪಕ್ಷದ ಘಟಕವು ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನವಾದ ಸೆಪ್ಟೆಂಬರ್ 17 ರಂದು ಜನಿಸಿದ ಪ್ರತಿ ಮಗುವಿಗೆ ಚಿನ್ನದ ಉಂಗುರವನ್ನು ನೀಡುವುದಾಗಿ ಘೋಷಿಸಿದೆ. ಅಷ್ಟೇ ಅಲ್ಲದೇ, 720 ಕೆಜಿ ಮೀನುಗಳನ್ನು ಸಹ ವಿತರಿಸಲಾಗುತ್ತದೆ.

ಈ ಯೋಜನೆಗಾಗಿ ಪಕ್ಷವು ಆರ್‌ಎಸ್‌ಆರ್‌ಎಂ ಆಸ್ಪತ್ರೆಯನ್ನು ಆಯ್ಕೆ ಮಾಡಿದೆ ಎಂದು ರಾಜ್ಯದ ಸಚಿವ ಎಲ್ ಮುರುಗನ್ ಮಾಹಿತಿ ನೀಡಿದ್ದಾರೆ.

ಅವರ ಪ್ರಕಾರ, ಪ್ರತಿ ಉಂಗುರವು 2 ಗ್ರಾಂ ತೂಕ ಹೊಂದಿರುತ್ತದೆ. ಸ್ಥಳೀಯ ಘಟಕದ ಪ್ರಕಾರ, ಸೆಪ್ಟೆಂಬರ್ 17 ರಂದು ಆಸ್ಪತ್ರೆಯಲ್ಲಿ 10-15 ಮಕ್ಕಳು ಜನಿಸುವ ನಿರೀಕ್ಷೆಯಿದೆ.

ಮೀನು ವಿತರಿಸುವ ಬಗ್ಗೆ ಮಾತನಾಡಿದ ಅವರು, ಇದಕ್ಕಾಗಿ ಎಂ.ಕೆ.ಸ್ಟಾಲಿನ್ ಅವರ ಕ್ಷೇತ್ರವನ್ನು ಆಯ್ಕೆ ಮಾಡಲಾಗಿದೆ. ಮೋದಿಯವರಿಗೆ 72 ವರ್ಷವಾಗುವುದರಿಂದ 720 ಕೆಜಿ ಮೀನು ವಿತರಿಸಲಾಗುವುದು ಎಂದು ಪತ್ರಿಕೆಯೊಂದು ವರದಿ ಮಾಡಿದೆ.

Read Entire Article