ಪಿಎಂ ಕೇರ್ಸ್​ ಫಂಡ್​ಗೆ ಟ್ರಸ್ಟಿಯಾಗಿ ರತನ್ ಟಾಟಾ , ಸಲಹಾ ಮಂಡಳಿ ಸದಸ್ಯೆಯಾಗಿ ಸುಧಾ ಮೂರ್ತಿ ನೇಮಕ

1 week ago 20

spot_img

For Breaking News Download App

ನವದೆಹಲಿ: ಪ್ರಧಾನ ಮಂತ್ರಿ ಕೇರ್ಸ್​ ಫಂಡ್​ಗೆ ಕೈಗಾರಿಕೋದ್ಯಮಿ ರತನ್ ಟಾಟಾ, ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಾಧೀಶ ಕೆಟಿ ಥಾಮಸ್ ಮತ್ತು ಲೋಕಸಭೆಯ ಮಾಜಿ ಉಪ ಸ್ಪೀಕರ್ ಕರಿಯಾ ಮುಂಡಾ ಅವರನ್ನು ಟ್ರಸ್ಟಿಗಳಾಗಿ ನಾಮನಿರ್ದೇಶನ ಮಾಡಲಾಗಿದೆ.

ಹಾಗೆ ಭಾರತದ ಮಾಜಿ ಕಂಟ್ರೋಲರ್ ಮತ್ತು ಆಡಿಟರ್ ಜನರಲ್ ರಾಜೀವ್ ಮೆಹ್ರಿಷಿ, ಇನ್ಫೋಸಿಸ್ ಫೌಂಡೇಶನ್‌ನ ಮಾಜಿ ಅಧ್ಯಕ್ಷೆ ಸುಧಾ ಮೂರ್ತಿ, ಇಂಡಿಕಾಪ್ಸ್​ ಮತ್ತು ಪಿರಮಲ್​ ಫೌಂಡೇಶನ್​ನ ಮಾಜಿ ಸಿಇಒ ಆನಂದ್​ ಶಾ ಅವರನ್ನು ಪಿಎಂ ಕೇರ್ಸ್ ನಿಧಿಯ ಸಲಹಾ ಮಂಡಳಿಗೆ ನಾಮನಿರ್ದೇಶನ ಮಾಡಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಪಿಎಂ ಕೇರ್ಸ್ ಫಂಡ್‌ ಟ್ರಸ್ಟಿಗಳ ಮಂಡಳಿಯ ಸಭೆಯಲ್ಲಿ ಈ ನಿರ್ಧಾರ ಮಾಡಲಾಗಿದೆ.

For Breaking News Download App

Read Entire Article