ಪೇಸಿಎಂ ಹೆಸರಿನ ಪೋಸ್ಟರ್ : ಮೂವರು ಅರೆಸ್ಟ್ 

1 week ago 25

spot_img

For Breaking News Download App

ಬೆಂಗಳೂರು : ನಗರದ ವಿವಿಧೆಡೆ ಕಾಂಗ್ರೆಸ್ ಪೇಸಿಎಂ ಹೆಸರಿನ ಪೋಸ್ಟರ್ ಅಂಟಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಮೂವರನ್ನು ವಶಕ್ಕೆ ಪಡೆದಿದ್ದಾರೆ.

ಪೋಸ್ಟರ್ ಅಂಟಿಸಿದ ಪ್ರಕರಣವನ್ನು ರಾಜ್ಯ ಸರ್ಕಾರ ಸಿಸಿಬಿ ವರ್ಗಾವಣೆ ಮಾಡಲಾಗಿತ್ತು. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಗಗನ್ ಯಾದವ್ ಮತ್ತು ಬಿ.ಆರ್.ನಾಯ್ಡು ಸೇರಿದಂತೆ ಮೂವರನ್ನು ಬಂಧಿಸಿದ್ದಾರೆ.

ಬಂಧಿತರು ಕೆಪಿಸಿಸಿ ಸೋಶಿಯಲ್ ಮೀಡಿಯಾ ಖಾತೆಗಳನ್ನು ನಿರ್ವಹಣೆ ಮಾಡುತ್ತಿದ್ದರು ಎನ್ನಲಾಗಿದ್ದು, ಬೆಂಗಳೂರಿನ ಹಲವೆಡೆ ಪೋಸ್ಟರ್ ಅಂಟಿಸಿರೋದು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು.

For Breaking News Download App

Read Entire Article