ಪೌರ ಕಾರ್ಮಿಕರರನ್ನು ಸರ್ಕಾರಿ ನೌಕರರಾಗಿ ಪರಿಗಣಿಸಿದಕ್ಕೆ ಶಾಸಕ ಬೆನಕೆ ಧನ್ಯವಾದ

1 week ago 24

ಬೆಳಗಾವಿ : ಬೆಂಗಳೂರಿನಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ರಾಜ್ಯ ಬಿ.ಜೆ.ಪಿ ಸರ್ಕಾರವು ನಗರಸಭೆ, ಪುರಸಭೆ, ಮಹಾನಗರ ಪಾಲಿಕೆ ಮತ್ತು ಇತರ ಪಟ್ಟಣ ಸ್ಥಳೀಯ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ರಾಜ್ಯದ ಪೌರಕಾರ್ಮಿಕರನ್ನು ವಿಶೇಷ ನೇಮಕಾತಿ ನಿಯಮಗಳ ಅಡಿಯಲ್ಲಿ ಸರ್ಕಾರಿ ನೌಕರರಾಗಿ ನೇಮಕಾತಿ ಮಾಡಲು ಸಮ್ಮತಿ ನೀಡಿದ ಪ್ರಯುಕ್ತ ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕ ಅನಿಲ ಬೆನಕೆರವರು ವ್ಯಯಕ್ತಿಕವಾಗಿ ಹಾಗೂ ಎಲ್ಲ ಪೌರಕಾರ್ಮಿಕರ ಪರವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಸಚಿವ ಸಂಪುಟಕ್ಕೆ ಹೃದಯಪೂರ್ವಕ ಕೃತಜ್ಞತೆಗಳನ್ನು ಅರ್ಪಿಸಿದರು.

ಸಾಮಾಜಿಕ ನ್ಯಾಯಕ್ಕೆ ಆದ್ಯತೆ ನೀಡುತ್ತೀರುವ ರಾಜ್ಯ ಬಿ.ಜೆ.ಪಿ ಸರ್ಕಾರವು ಎಲ್ಲರ ಹಿತವನ್ನು ಕಾಯುತ್ತಿದ್ದು, ಪೌರಕಾರ್ಮಿಕರ ಹಲವಾರು ವರ್ಷಗಳ ಬೇಡಿಕೆಯನ್ನು ಈಡೇರಿಸಿರುವುದು ಅತೀ ಸಂತೋಷದ ಸಂಗತಿಯಾಗಿದೆ ಎಂದು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.

Read Entire Article