ಪ್ರಧಾನಿ ಹುಟ್ಟು ಹಬ್ಬ : ನಾಳೆ ಬಿಜೆಪಿಯಿಂದ ಸೇವಾ ಪಾಕ್ಷಿಕ ಕಾರ್ಯಕ್ರಮ

2 weeks ago 28

ಬೆಳಗಾವಿ : ನಾಳೆ ಪ್ರಧಾನಿ ನರೇಂದ್ರ ಮೋದಿ ಜನ್ಮದಿನದ ಅಂಗವಾಗಿ ಸೆಪ್ಟೆಂಬರ್ 17ರಿಂದ ಅಕ್ಟೋಬರ್ 2 ರವರೆಗೆ ಸೇವಾ ಪಾಕ್ಷಿಕ ಅಡಿಯಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ಈ ಕುರಿತು ಬಿಜೆಪಿ ಬೆಳಗಾವಿ ಗ್ರಾಮೀಣ ಮಂಡಳ ಅಧ್ಯಕ್ಷ ಧನಂಜಯ ಜಾಧವ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೆಪ್ಟೆಂಬರ್.17ರಂದು ಪ್ರಧಾನಿಗಳ ಹುಟ್ಟುಹಬ್ಬ ಇರುವುದರಿಂದ ನಾವೆಲ್ಲರು ಸೇವಾ ಪಾಕ್ಷಿಕ ಅಡಿಯಲ್ಲಿ 15 ದಿನಗಳ ಕಾಲ ಅನೇಕ ಸೇವಾ ಚಟುವಟಿಕೆಗಳನ್ನು ನಡೆಸಿ ಅವುಗಳ ಮೂಲಕ ಪ್ರಧಾನಿಗಳ ದೀರ್ಘಾಯುಷ್ಯ ಮತ್ತು ಆರೋಗ್ಯಕ್ಕಾಗಿ ಪ್ರಾರ್ಥಿಸಲಾಗುವುದು ಎಂದರು.

V4_Kannada_SEVA PAKSHIKA-Mane Manege Sarkara_220910_190639

ಪ್ರಧಾನ ಮಂತ್ರಿಗಳ ಜೀವನ ಮತ್ತು ಗುರಿಯ ಕುರಿತು ಒಂದು ಪ್ರದರ್ಶನವನ್ನು ಜಿಲ್ಲಾ ಮತ್ತು ಮಂಡಲ ಮಟ್ಟದಲ್ಲಿ ಆಯೋಜಿಸಲಾಗುತ್ತಿದೆ. ಜನ ಕಲ್ಯಾಣ ಯೋಜನೆಗಳ ಕುರಿತಾದ ಪುಸ್ತಕಗಳನ್ನು ಪ್ರದರ್ಶಿಸಲಾಗುವುದು. ಯುವ ಮೋರ್ಚಾದ ವತಿಯಿಂದ ರಕ್ತದಾನ ಶಿಬಿರಗಳನ್ನು ಆಯೋಜಿಸಲಾಗುತ್ತಿದೆ. ಜಿಲ್ಲೆಗಳಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರಗಳನ್ನು ಆಯೋಜಿಸಲಾಗಿದೆ ಎಂದರು.

Read Entire Article