ಬೃಹತ್ ಮರ ಬಿದ್ದು ಯುವ ಸಾವು : ಡಿಸಿಯಿಂದ ತಕ್ಷಣವೇ ಐದು ಲಕ್ಷ ಪರಿಹಾರ ಬಿಡುಗಡೆ

2 weeks ago 32

ಬೆಳಗಾವಿ : ನಗರದ ಆರ್.ಟಿ.ಓ. ವೃತ್ತದ ಸಮೀಪ ಬೃಹತ್ ಮರ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದ ಯುವಕನ ವಾರಸುದಾರರಿಗೆ ತಕ್ಷಣವೇ ಐದು ಲಕ್ಷ ರೂಪಾಯಿ ಪರಿಹಾರ ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ.

ಬೆಳಗಾವಿ ತಾಲ್ಲೂಕು ತುಮ್ಮರಗುದ್ದಿ ಗ್ರಾಮದ ಸಿದ್ದನಹಳ್ಳಿ ಮಜರೆ ನಿವಾಸಿ ರಾಕೇಶ್ ಲಗಮಪ್ಪ ಸುಲಧಾಳ(27) ಎಂಬ ಯುವಕ ಮಂಗಳವಾರ (ಸೆ.13) ಬೆಳಗಾವಿ ನಗರದ ಆರ್.ಟಿ.ಓ. ವೃತ್ತದ ಮರಾಠಾ ಮಂಡಳ ಶಾಲೆಯ ಬಳಿ ಬೈಕ್ ಮೇಲೆ ತೆರಳುತ್ತಿರುವಾಗ ಮಳೆ-ಗಾಳಿಯಿಂದ ಬೃಹತ್ ಮರ ಬಿದ್ದು ಮೃತಪಟ್ಟಿದ್ದನು.

ಈ ಕುರಿತು ಬಿಮ್ಸ್ ನಿಂದ ಮರಣೋತ್ತರ ವರದಿ ಪಡೆದುಕೊಂಡು ತಕ್ಷಣವೇ ಮೃತ ಯವಕನ ತಾಯಿ ಹಾಲವ್ವ ಲಗಮಪ್ಪ ಸುಲಧಾಳ ಅವರ ಆಕ್ಸಿಸ್ ಬ್ಯಾಂಕ್ ಖಾತೆಗೆ ಐದು ಲಕ್ಷ ರೂಪಾಯಿ ಪರಿಹಾರಧನವನ್ನು ಬೆಳಗಾವಿ ತಹಶೀಲ್ದಾರ ಕಚೇರಿಯಿಂದ ಆರ್.ಟಿ.ಜಿ.ಎಸ್. ಮೂಲಕ ಬಿಡುಗಡೆ ಮಾಡಲಾಗಿರುತ್ತದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ.

ಮೃತ ಯುವಕ ರಾಕೇಶ್ ಲಗಮಪ್ಪ ಸುಲಧಾಳ ಅವರ ಕುಟುಂಬಕ್ಕೆ ಸಾಂತ್ವನವನ್ನು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

Read Entire Article