ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧದ ತನಿಖೆಗೆ ಸುಪ್ರೀಂ ತಡೆ 

1 week ago 18

ಬೆಂಗಳೂರು : ಭ್ರಷ್ಟಾಚಾರ ತಡೆ ಕಾಯ್ದೆಯಡಿ ಯಡಿಯೂರಪ್ಪ ಮತ್ತು ಇತರರ ವಿರುದ್ಧ ದಾಖಲಾಗಿದ್ದ ಲಂಚ ಪ್ರಕರಣದ ದೂರನ್ನು ಮರುಸ್ಥಾಪಿಸಿದ ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಮಾಜಿ ಸಿಎಂ ಯಡಿಯೂರಪ್ಪ ಸಲ್ಲಿಸಿದ ಮನವಿಗೆ ಸುಪ್ರೀಂಕೋರ್ಟ್ ನೋಟಿಸ್ ಜಾರಿ ಮಾಡಿದೆ.

ಅರ್ಜಿದಾರರಿಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಮುಂದಿನ ಪ್ರಕ್ರಿಯೆಗಳಿಗೆ ತಡೆ ನೀಡಿದೆ. ಯಡಿಯೂರಪ್ಪನವರು ತಮ್ಮ ವಿರುದ್ದ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ದಾಖಲಾಗಿರುವ ಪ್ರಕರಣ ಸಂಬಂಧ ಸುಪ್ರಿಂಕೋರ್ಟ್‌ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಇಂದು ಅರ್ಜಿ ವಿಚಾರಣೆಯನ್ನು ಮತ್ತೆ ನ್ಯಾಯಮೂರ್ತಿಗಳಾದ ಡಿವೈ ಚಂದ್ರಚೂಡ್ ಮತ್ತು ಹಿಮಾ ಕೊಹ್ಲಿ ಅವರನ್ನೊಳಗೊಂಡ ಪೀಠ ವಿಚಾರಣೆ ನಡೆಸಿತು. ಇದೇ ವೇಳೆ ನ್ಯಾಯಾಪೀಠವು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಅವರ ಕುಟುಂಬದವರು ಸಲ್ಲಿಸಿದ್ದ ಅರ್ಜಿಗೆ ಸಂಬಂಧ ಪಟ್ಟಂತೆ ಮಧ್ಯಂತರ ತಡೆ ನೀಡಿದೆ.

ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಹಾಂ ಅವರು ಯಡಿಯೂರಪ್ಪ ಹಾಗೂ ಅವರ ಕುಟುಂಬದವರ ಮೇಲೆ 12 ಕೋಟಿ ಲಂಚ ತೆಗೆದುಕೊಂಡಿದ್ದರು ಅಂತ ಆರೋಪಿಸಿ ಜನಪ್ರತಿನಿಧಿಗಳ ಕೋರ್ಟ್ ಗೆ ದೂರು ನೀಡಿದ್ದರು, ಇದೇ ವೇಳೆ ​ ಜನಪ್ರತಿನಿಧಿಗಳ ಕೋರ್ಟ್ ನವೆಂಬರ್ 2, 2022 ರೊಳಗೆ ವರದಿ ಸಲ್ಲಿಸುವಂತೆ ಲೋಕಾಯುಕ್ತ ಪೊಲೀಸರಿಗೆ ಸೂಚಿಸಿತ್ತು.

ಇದರಲ್ಲಿ ನ್ಯಾಯಾಲಯದ ಆದೇಶದಂತೆ ಲೋಕಾಯುಕ್ತ ಪೊಲೀಸರು ಆರೋಪಿಗಳ ವಿರುದ್ಧ ಎಫ್‌ಐಆರ್ ಮಾಡಿದ್ದರು. ಇದರ ವಿರುದ್ದ ಯಡಿಯೂರಪ್ಪ ಹೈಕೋರ್ಟ್​ ಹಾಗೂ ವಿಶೇಷ ನ್ಯಾಯಾಲಯದ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್​ ಮೆಟ್ಟಿಲೇರಿದ್ದಾದ್ದರು.

Read Entire Article