ಯೂಟ್ಯೂಬ್ ನಿಷೇಧ ಸುಳ್ಳು : ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸ್ಪಷ್ಟನೆ

2 weeks ago 33

ಬೆಳಗಾವಿ : ಯೂಟ್ಯೂಬ್ ಚಾನೆಲ್ ಗಳನ್ನು ಬ್ಯಾನ್ ಮಾಡಲಾಗಿದೆ ಎಂಬ “ಮಾಧ್ಯಮ ಪ್ರಕಟಣೆ”ಯೊಂದು ಸಾಮಾಜಿಕ‌ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಇದು ಸತ್ಯಕ್ಕೆ ದೂರವಾಗಿದೆ. ಇಂತಹ ಯಾವುದೇ ಪ್ರಕಟಣೆಯನ್ನು ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯಿಂದ ‌ಹೊರಡಿಸಿರುವುದಿಲ್ಲ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸ್ಪಷ್ಟಪಡಿಸಿದ್ದಾರೆ.

ಯೂಟ್ಯೂಬ್ ಚಾನೆಲ್ ಬ್ಯಾನ್ ಮಾಡಲಾಗಿರುತ್ತದೆ ಎಂಬ ನಕಲಿ ಮಾಧ್ಯಮ ಪ್ರಕಟಣೆಯನ್ನು ಸೃಷ್ಟಿಸಿ ಸಾಮಾಜಿಕ‌ ಜಾಲತಾಣಗಳಲ್ಲಿ ಹಾಗೂ ವಿವಿಧ ವಾಟ್ಸಾಪ್ ಗ್ರುಪ್ ಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ಇದು ಸಾರ್ವಜನಿಕರಲ್ಲಿ ಗೊಂದಲವನ್ನು ‌ಮೂಡಿಸುತ್ತಿದೆ.

ಈ ರೀತಿಯಲ್ಲಿ ಸುಳ್ಳು ಮಾಹಿತಿಯನ್ನು ಸೃಷ್ಟಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡು ವಿನಾಕಾರಣ ಗೊಂದಲ ಮೂಡಿಸುತ್ತಿರುವವರ ವಿರುದ್ಧ ಕಾನೂನು ಕ್ರಮವನ್ನು ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಎಚ್ಚರಿಕೆ ನೀಡಿದ್ದಾರೆ.

Read Entire Article