ಶಾಲೆ ಆವರಣದಲ್ಲಿ ಆತ್ಮಹತ್ಯೆ ಮಾಡಿಕೊಂಡ 9ನೇ ತರಗತಿ ವಿದ್ಯಾರ್ಥಿ

1 week ago 24

ಕಾರವಾರ: ಶಾಲೆಯ ಆವರಣದಲ್ಲಿಯೇ ವಿದ್ಯಾರ್ಥಿಯೋರ್ವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಪ್ರೊಗ್ರೆಸ್ಸಿವ್ ಪ್ರೌಢ ಶಾಲೆಯಲ್ಲಿ ನಡೆದಿದೆ.

9 ನೇ ತರಗತಿಯ ವಿದ್ಯಾರ್ಥಿ ಅಯಾನ್ ಬಾಬು ಶೇಖ್ ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿ. ಶಾಲೆಯ ಆವರಣದಲ್ಲಿದ್ದ ಬಾವಿಗೆ ಹಾರಿ ಸಾವಿಗೆ ಶರಣಾಗಿದ್ದು ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ.

ಪೋಷಕರು ಬೈಯ್ದಿದ್ದಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಶಿರಸಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಅಗಮಿಸಿ ಪರಿಶೀಲನೆ ನಡೆಸಿದ್ದಾರೆ.

Read Entire Article