ರಾಜ್ಯದಲ್ಲಿ ಮಳೆಗೆ ಇದೇ ತಿಂಗಳಲ್ಲಿ 13 ಜನ ಸಾವು 

khushihost
ರಾಜ್ಯದಲ್ಲಿ ಮಳೆಗೆ ಇದೇ ತಿಂಗಳಲ್ಲಿ 13 ಜನ ಸಾವು 

ಬೆಂಗಳೂರು : ರಾಜ್ಯಾದ್ಯಂತ ನಿರಂತರವಾಗಿ ಭಾರೀ ಮಳೆಯಾಗುತ್ತಿದ್ದು, ಈ ತಿಂಗಳ ಆರಂಭದಿಂದ ಕರ್ನಾಟಕದ ವಿವಿಧ ಭಾಗಗಳಲ್ಲಿ ಮಳೆಯಿಂದ 13 ಜನ ಮೃತಪಟ್ಟಿದ್ದಾರೆ.

ಭಾರೀ ಮಳೆಯಿಂದ ಜಾನುವಾರುಗಳು ಮತ್ತು ಆಸ್ತಿಗಳಿಗೆ ದೊಡ್ಡ ಪ್ರಮಾಣದ ಹಾನಿ ಸಂಭವಿಸಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿನ್ನೆ ಜಿಲ್ಲಾಧಿಕಾರಿಗಳಿಗೆ ಮಳೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುವಂತೆ ಸೂಚಿಸಿದ್ದಾರೆ.

ಅಕ್ಟೋಬರ 1 ರಿಂದ ಮಳೆಯಿಂದಾಗಿ ಕರ್ನಾಟಕದಲ್ಲಿ 28 ಜಾನುವಾರುಗಳು ಸಾವನ್ನಪ್ಪಿವೆ, 3,309 ಮನೆಗಳಿಗೆ ಹಾನಿಯಾಗಿದೆ, ಸುಮಾರು 6,279 ಹೆಕ್ಟೇರ್‌ನಲ್ಲಿ ಬೆಳೆ ಹಾನಿಯಾಗಿದೆ. ಅಕ್ಟೋಬರ‌ನಲ್ಲಿ ಸಂಭವಿಸಿದ ಮಳೆ ಹಾನಿಗೆ ಪರಿಹಾರವನ್ನು ತಕ್ಷಣವೇ ಜಂಟಿ ಸಮೀಕ್ಷೆ ನಡೆಸಿ ಈ ತಿಂಗಳೊಳಗೆ ವಿತರಿಸಬೇಕು ಎಂದು ಬೊಮ್ಮಾಯಿ ಸೂಚನೆ ನೀಡಿದ್ದಾರೆ.

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಅ. 15ರವರೆಗೆ ಭಾರೀ ಮಳೆಯಾಗಲಿದೆ. ಇಂದು ಕರ್ನಾಟಕದ ಕರಾವಳಿ, ಉತ್ತರ ಮತ್ತು ದಕ್ಷಿಣ ಒಳಭಾಗಕ್ಕೆ ಹವಾಮಾನ ಇಲಾಖೆ ಹಳದಿ ಅಲರ್ಟ್ ಘೋಷಿಸಿದೆ.

Share This Article