ಮೀಸಲಾತಿ ಬೇಡಿಕೆ ಈಡೇರದಿದ್ದರೆ ವಿಧಾನಸೌಧದ ಮುಂದೆ 25 ಲಕ್ಷ ಪಂಚಮಸಾಲಿ ಲಿಂಗಾಯತರಿಂದ ಪ್ರತಿಭಟನೆ

khushihost
ಮೀಸಲಾತಿ ಬೇಡಿಕೆ ಈಡೇರದಿದ್ದರೆ ವಿಧಾನಸೌಧದ ಮುಂದೆ 25 ಲಕ್ಷ ಪಂಚಮಸಾಲಿ ಲಿಂಗಾಯತರಿಂದ ಪ್ರತಿಭಟನೆ

ಬೆಳಗಾವಿ : ಹುಕ್ಕೇರಿಯಲ್ಲಿ ಅಕ್ಟೋಬರ 21 ರಂದು ಲಿಂಗಾಯಿತ ಪಂಚಮಸಾಲಿ ಬೃಹತ್ ಸಮಾವೇಶ ನಡೆಯಲಿದ್ದು, ಅಷ್ಟರಲ್ಲಿ ಸರ್ಕಾರ ಸರ್ವ ಪಕ್ಷಗಳ ಸಭೆ ಕರೆದು ಲಿಂಗಾಯತ ಪಂಚಮಸಾಲಿಗೆ 2ಎ ಮೀಸಲಾತಿ ಸಂಬಂಧ ಅಂತಿಮ ತೀರ್ಮಾನ ಕೈಗೊಳ್ಳಬೇಕು. ಇಲ್ಲದೇ ಇದ್ದರೆ ಹುಕ್ಕೇರಿ ಸಮಾವೇಶದಲ್ಲಿ ವಿಧಾನಸೌಧ ಮುತ್ತಿಗೆಗೆ ಕರೆ ನೀಡುವುದಾಗಿ ಪಂಚಮಸಾಲಿ ಮಠದ ಪೀಠಾಧ್ಯಕ್ಷ ಬಸವ ಮೃತ್ಯುಂಜಯ ಸ್ವಾಮೀಜಿ ಎಚ್ಚರಿಸಿದ್ದಾರೆ.

ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಪಂಚಮಸಾಲಿ ಲಿಂಗಾಯತ ಸಮುದಾಯಕ್ಕೆ 2ಎ ಮೀಸಲಾತಿ ನೀಡುವಂತೆ ಒತ್ತಾಯಿಸಿ ಮಾಡುತ್ತಿರುವ ಹೋರಾಟ 2 ವರ್ಷ ತಲುಪಿದೆ. ಆದರೂ ಸರ್ಕಾರ ಯಾವುದೇ ತೀರ್ಮಾನ ಕೈಗೊಳ್ಳದೇ ನುಣಿಚಿಕೊಳ್ಳುತ್ತಿದೆ ಎಂದರು.

ಈಗಾಗಲೇ ಲಿಂಗಾಯತ ಸಮುದಾಯದ 31 ಉಪ ಪಂಗಡಗಳಿಗೆ 2 ಎ ಮೀಸಲಾತಿ ಸ್ಥಾನ ನೀಡಿದೆ. ಅದೇ ರೀತಿಯಲ್ಲಿ ಸರ್ಕಾರ ನಮ್ಮ ಸಮುದಾಯಕ್ಕೂ ನೀಡಲಿ ಎಂಬುವುದು ನಮ್ಮ ಹಕ್ಕೊತ್ತಾಯವಾಗಿದೆ ಎಂದು ಹೇಳಿದರು.

ಸರ್ಕಾರ ಈ ಬಗ್ಗೆ ತೀರ್ಮಾನ ಕೈಗೊಳ್ಳದೇ ಹೋದರೆ, ವಿಧಾನಸೌಧದ ಮುಂದೆ 25 ಲಕ್ಷ ಪಂಚಮಸಾಲಿ ಲಿಂಗಾಯತರನ್ನು ಸೇರಿಸಿ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

Share This Article