ಪ್ರಬಲ ಲಿಂಗಾಯತ, ಒಕ್ಕಲಿಗ ಸಮುದಾಯಗಳಿಗೆ 2ಸಿ, 2ಡಿ ಮೀಸಲಾತಿ

khushihost
ಪ್ರಬಲ ಲಿಂಗಾಯತ, ಒಕ್ಕಲಿಗ ಸಮುದಾಯಗಳಿಗೆ 2ಸಿ, 2ಡಿ ಮೀಸಲಾತಿ

ಬೆಳಗಾವಿ: ರಾಜ್ಯದ ಎರಡು ಅತ್ಯಂತ ಪ್ರಬಲ ಸಮುದಾಯಗಳಿಗೆ ರಾಜ್ಯ ಸರ್ಕಾರ ಪ್ರತ್ಯೇಕ ಪ್ರವರ್ಗ ಸೃಷ್ಟಿಸಿ ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ ನೀಡುವ ಮಹತ್ವದ ತೀರ್ಮಾನವನ್ನು ತೆಗೆದುಕೊಂಡಿದೆ.

ಪಂಚಮಸಾಲಿ ಸೇರಿದಂತೆ ವೀರಶೈವ ಲಿಂಗಾಯತ ಸಮುದಾಯಕ್ಕೆ ಮತ್ತು ಒಕ್ಕಲಿಗ ಸಮುದಾಯಗಳಿಗೆ ರಾಜ್ಯ ಸರ್ಕಾರ ಲಿಂಗಾಯತ ಮತ್ತು ಒಕ್ಕಲಿಗರಿಗೆ ಹೊಸ ಕೆಟಗರಿ ಸೃಷ್ಟಿ ಮಾಡಿದ್ದು, 3ಎ ನಲ್ಲಿದ್ದ ಒಕ್ಕಲಿಗರನ್ನು 2ಸಿಗೆ ಮತ್ತು 3 ಬಿ ನಲ್ಲಿದ್ದ ಲಿಂಗಾಯತರನ್ನು 2ಡಿ ಕೆಟಗರಿಯಲ್ಲಿ ಮೀಸಲಾತಿ ನೀಡಲಾಗಿದೆ.

ಮೀಸಲಾತಿ ಪ್ರಮಾಣವನ್ನು ನಂತರ ನಿರ್ಧರಿಸಲಾಗುವುದು ಎಂದು ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ ಮಾಧುಸ್ವಾಮಿ ಅವರು ಹೇಳಿದ್ದಾರೆ.

ಬೆಳಗಾವಿಯಲ್ಲಿ ಗುರುವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಮಾಧುಸ್ವಾಮಿ ತಿಳಿಸಿದ್ದಾರೆ.

ಸಚಿವ ಸಂಪುಟ ಸಭೆಯ ಬಳಿಕ ಸಚಿವರು ಸುದ್ದಿಗಾರರಿಗೆ ಈ ಮಾಹಿತಿ ನೀಡಿದರು. ಅ, 2ಎ ಮೀಸಲಾತಿ ಕೇಳಿದ್ದ ಪಂಚಮಸಾಲಿ ಸೇರಿದಂತೆ ವೀರಶೈವ ಲಿಂಗಾಯತರಿಗೆ 2 ಡಿ ಕೆಟಗರಿಯಲ್ಲಿ ಮೀಸಲಾತಿ ನೀಡಲಾಗಿದೆ. 3ಎ ನಲ್ಲಿದ ಒಕ್ಕಲಿಗರಿಗೆ 2ಸಿ ಮೀಸಲಾತಿ ನೀಡಲಾಗಿದೆ. ಇದರಿಂದ 2ಎ ಮತ್ತು 2 ಬಿ ಮೀಸಲಾತಿಯಲ್ಲಿ ಯಾವುದೇ ಬದಲಾವಣೆಯಾಗುವುದಿಲ್ಲ ಎಂದು ಹೇಳಿದ್ದಾರೆ.

Share This Article