ಶಿಕ್ಷಕನ ಹೊಡೆತಕ್ಕೆ 4ನೇ ತರಗತಿ ವಿದ್ಯಾರ್ಥಿನಿ ಸಾವು

khushihost
ಶಿಕ್ಷಕನ ಹೊಡೆತಕ್ಕೆ 4ನೇ ತರಗತಿ ವಿದ್ಯಾರ್ಥಿನಿ ಸಾವು

ಬೆಂಗಳೂರು, 5- ಶಿಕ್ಷಕರ ಏಟಿಗೆ ವಿದ್ಯಾರ್ಥಿನಿ ಬಲಿಯಾದ ಅಮಾನವೀಯ ಘಟನೆ ಬೆಂಗಳೂರಿನ ರಾಮಚಂದ್ರಾಪುರದ ಖಾಸಗಿ ಶಾಲೆಯಲ್ಲಿ ನಡೆದಿದೆ. ನಾಲ್ಕನೇ ತರಗತಿ ಓದುತ್ತಿದ್ದ ನಿಶಿತಾ ಮೃತಪಟ್ಟಿದ್ದಾಳೆ.

ಶಿಕ್ಷಕನ ಹೊಡೆತಕ್ಕೆ ಮೊದಲ ಹೊಡೆತಕ್ಕೆ ವಿದ್ಯಾರ್ಥಿನಿ ತರಗತಿಯಲ್ಲೇ ಎಚ್ಚರ ತಪ್ಪಿ ಬಿದ್ದಿದ್ದಾಳೆ. ಕೂಡಲೇ ಆಕೆಯನ್ನು ರಾಮಯ್ಯ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ.

ಮಗಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದ್ದು, ಘಟನೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಈ ಕುರಿತು ಗಂಗಮ್ಮನ ಗುಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Share This Article