5, 8ನೇ ತರಗತಿ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಪೂರಕ ಪರೀಕ್ಷೆ ಇಲ್ಲ

khushihost
5, 8ನೇ ತರಗತಿ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಪೂರಕ ಪರೀಕ್ಷೆ ಇಲ್ಲ

ಬೆಂಗಳೂರು: ಐದು ಮತ್ತು ಎಂಟನೇ ತರಗತಿ ಮಕ್ಕಳಿಗೆ ಪೂರಕ ಪರೀಕ್ಷೆ ಇರುವುದಿಲ್ಲ. ಐದು, ಎಂಟನೇ ತರಗತಿಯ ಮಕ್ಕಳಿಗೆ ನಡೆಸಿದ ಮೌಲ್ಯಾಂಕನ ಪರೀಕ್ಷೆಯಲ್ಲಿ ಕಡಿಮೆಯ ಅಂಕ ಪಡೆದವರಿಗೆ ಜೂನ್ ಮತ್ತು ಜುಲೈನಲ್ಲಿ ಪರಿಹಾರ ಬೋಧನೆ ನಡೆಸಿ ಶಾಲಾ ಹಂತದಲ್ಲಿ ಎರಡು ಪೂರಕ ಪರೀಕ್ಷೆಗಳನ್ನು ನಡೆಸುವ ನಿರ್ಧಾರವನ್ನು ಶಿಕ್ಷಣ ಇಲಾಖೆ ಕೈಬಿಟ್ಟಿದೆ.

ಈ ಮೊದಲು ಶಿಕ್ಷಣ ಇಲಾಖೆ ಕಡಿಮೆ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜೂನ್ ಮತ್ತು ಜುಲೈನಲ್ಲಿ ಪರಿಹಾರ ಬೋಧನೆ ನಡೆಸಿ ಶಾಲಾ ಹಂತದಲ್ಲಿ ಎರಡು ಪೂರಕ ಪರೀಕ್ಷೆ ನಡೆಸಲು ನಿರ್ಧರಿಸಿತ್ತು. ಆದರೆ, ಪರೀಕ್ಷೆ ನಡೆಸದಿರಲು ತೀರ್ಮಾನಿಸಲಾಗಿದೆ. ಜೂನ್ ಮತ್ತು ಜುಲೈ ತಿಂಗಳಲ್ಲಿ ಪರಿಹಾರ ಬೋಧನೆ ನಡೆಸಿ ಕಲಿಕಾ ಸಾಮರ್ಥ್ಯ ಉತ್ತಮಗೊಳಿಸಲು ಶಿಕ್ಷಣ ಇಲಾಖೆ ಸೂಚನೆ ನೀಡಿದೆ.

Share This Article