21 ದಿನಗಳ ಶಿಶುವಿನ ಹೊಟ್ಟೆಯಲ್ಲಿ 8 ಭ್ರೂಣ ಪತ್ತೆ

khushihost
21 ದಿನಗಳ ಶಿಶುವಿನ ಹೊಟ್ಟೆಯಲ್ಲಿ 8 ಭ್ರೂಣ ಪತ್ತೆ

ರಾಂಚಿ : 21 ದಿನಗಳ ಹಸುಗೂಸಿನ ಹೊಟ್ಟೆಯಲ್ಲಿ 8 ಭ್ರೂಣಗಳು ಪತ್ತೆಯಾದ ವಿಚಿತ್ರ ಘಟನೆ ರಾಂಚಿಯಲ್ಲಿ ಅಪರೂಪದ ಪ್ರಕರಣವೊಂದು ಬೆಳಕಿಗೆ ಬಂದಿದೆ.

ಶಸ್ತ್ರಚಿಕಿತ್ಸೆ ಮೂಲಕ ಭ್ರೂಣಗಳನ್ನು ಹೊರತೆಗೆಯಲಾಗಿದೆ. ಭ್ರೂಣಗಳ ಗಾತ್ರವು ಮೂರು ಸೆಂಟಿ ಮೀಟರ್‌ಗಳಿಂದ ಐದು ಸೆಂಟಿಮೀಟರ್‌ಗಳವರೆಗೆ ಇತ್ತು. ಹೊಟ್ಟೆಯಲ್ಲಿನ ಚೀಲದೊಳಗೆ ಭ್ರೂಣಗಳಿದ್ದವು ಎಂದು ಶಸ್ತ್ರಚಿಕಿತ್ಸೆ ನಡೆಸಿದ ಡಾ.ಎಂ.ಡಿ.ಇಮ್ರಾನ್ ತಿಳಿಸಿದ್ದಾರೆ.

ವೈದ್ಯಕೀಯ ಪರಿಭಾಷೆಯಲ್ಲಿ, ಇದನ್ನು ಫೋಯೆಟಸ್‌-ಇನ್-ಫೆಟು ಎಂದು ಕರೆಯಲಾಗುತ್ತದೆ. ಇದು ಅಪರೂಪದ ಘಟಕವಾಗಿದ್ದು, ಅದರಲ್ಲಿ ಒಂದು ದೋಷಪೂರಿತ ಕಶೇರುಕ ಭ್ರೂಣವು ಅವಳಿ ದೇಹದೊಳಗೆ ಸುತ್ತುವರಿಯಲ್ಪಟ್ಟಿದೆ.

ಇದುವರೆಗೆ ಬೆಳಕಿಗೆ ಬಂದ ಪ್ರಕರಣಗಳಲ್ಲಿ ಕೇವಲ ಒಂದು ಭ್ರೂಣವಿತ್ತು. ಆದರೆ ಶಿಶುವಿನ ಹೊಟ್ಟೆಯಲ್ಲಿ ಎಂಟು ಭ್ರೂಣ ಪತ್ತೆಯಾಗಿರುವುದು ಇದೇ ಮೊದಲು. ಐದು ಲಕ್ಷ ಮಂದಿಯ ಪೈಕಿ ಒಬ್ಬರಲ್ಲಿ ಮಾತ್ರ ಇಂತಹ ಪ್ರಕರಣ ಸಂಭವಿಸುತ್ತದೆ ಅಂತಾ ಡಾ. ಇಮ್ರಾನ್‌ ಮಾಹಿತಿ ನೀಡಿದ್ದಾರೆ.

ನವೆಂಬರ್ 1ರಂದು ಶಿಶುವನ್ನು ಪರೀಕ್ಷಿಸಿದಾಗ ಒಂದರ ನಂತರ ಒಂದರಂತೆ ಎಂಟು ಭ್ರೂಣಗಳು ಪತ್ತೆಯಾಗಿವೆ. ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿದ್ದು, ಸದ್ಯ ಮಗು ಆರೋಗ್ಯವಾಗಿದೆ. ಮಗು ಸದ್ಯ ತೀವ್ರ ನಿಗಾ ಘಟಕದಲ್ಲಿದ್ದು, ಇನ್ನೊಂದು ವಾರದಲ್ಲಿ ಡಿಸ್ಚಾರ್ಜ್‌ ಆಗಲಿದೆ.

Share This Article