3 ವಾಹನಗಳ ನಡುವೆ ಢಿಕ್ಕಿ : ನಾಲ್ವರು ಮಕ್ಕಳು ಸೇರಿ 9 ಜನರ ಸಾವು 

khushihost
3 ವಾಹನಗಳ ನಡುವೆ ಢಿಕ್ಕಿ : ನಾಲ್ವರು ಮಕ್ಕಳು ಸೇರಿ 9 ಜನರ ಸಾವು 

ಹಾಸನ: ಕೆಎಸ್ಆರ್ ಟಿಸಿ ಬಸ್, ಟ್ಯಾಂಕರ್ ಹಾಗು ಟಿಟಿ ವಾಹನದ ನಡುವೆ ನಡೆದ ಭೀಕರ ಅಪಘಾತದಲ್ಲಿ ಒಂಭತ್ತು ಜನರು ಸಾವನ್ನಪ್ಪಿದ ಘಟನೆ ತಡರಾತ್ರಿಯ ಅರಸೀಕೆರೆ ತಾಲೂಕಿನಲ್ಲಿ ನಡೆದಿದೆ.

ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ಹಳ್ಳಿಕೆರೆ ಗ್ರಾಮದ ಬಳಿ ಶನಿವಾರ ರಾತ್ರಿ ಅಪಘಾತ ಸಂಭವಿಸಿದ್ದು, ನಾಲ್ವರು ಮಕ್ಕಳು ಸೇರಿದಂತೆ 9 ಜನ ಸಾವನ್ನಪ್ಪಿದ್ದಾರೆ.

ಧರ್ಮಸ್ಥಳದಿಂದ ಬೆಂಗಳೂರಿಗೆ ತೆರಳುತ್ತಿದ್ದ ಟಿಟಿ ವಾಹನ ಟ್ಯಾಂಕರ್ ಓವರ್ ಟೇಕ್ ಮಾಡುವಾಗ ಎದುರಿನಿಂದ ಬಂದ ಕೆಎಸ್ಆರ್.ಟಿಸಿ ಬಸ್ ಗೆ ಢಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಹಾಸನ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

Share This Article