ಮುರುಘಾ ಮಠಕ್ಕೆ ಆಡಳಿತಾಧಿಕಾರಿ ನೇಮಕ

khushihost
ಮುರುಘಾ ಮಠಕ್ಕೆ ಆಡಳಿತಾಧಿಕಾರಿ ನೇಮಕ

ಬೆಂಗಳೂರು: ಚಿತ್ರದುರ್ಗದ ಮುರುಘಾ ಮಠಕ್ಕೆ ಆಡಳಿತಾಧಿಕಾರಿ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಕಳೆದ ಮೂರು ತಿಂಗಳಿಂದ ಮುರುಘಾ ಶ್ರೀಗಳು ನ್ಯಾಯಾಂಗ ಬಂಧನದಲ್ಲಿರುವುದರಿಂದ ಚಿತ್ರದುರ್ಗದ ಮುರುಘಾ ಮಠಕ್ಕೆ ನಿವೃತ್ತ ಐಎಎಸ್ ಅಧಿಕಾರಿ ಪಿ.ಎಸ್. ವಸ್ತ್ರದ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರದ ಉಪ ಕಾರ್ಯದರ್ಶಿ ಟಿ.ಸಿ. ಕಾಂತರಾಜ ಆದೇಶ ಹೊರಡಿಸಿದ್ದಾರೆ.

ಪೋಕ್ಸೋ ಪ್ರಕರಣದಲ್ಲಿ ಮುರುಘಾ ಶ್ರೀಗಳು ಜೈಲು ವಾಸ ಅನುಭವಿಸುತ್ತಿರುವ ಹಿನ್ನೆಲೆಯಲ್ಲಿ ಮುರುಘಾ ಮಠದ ಶಿಕ್ಷಣ ಸಂಸ್ಥೆ, ಮಠದ ಚಿರ, ಸ್ಥಿರ ಆಸ್ತಿ ಲೆಕ್ಕಪತ್ರ ನಿರ್ವಹಣೆ ಜವಾಬ್ದಾರಿ ನೋಡಿಕೊಳ್ಳುವ ನಿಟ್ಟಿನಲ್ಲಿ ಸರ್ಕಾರ ಆಡಳಿತಾಧಿಕಾರಿ ನೇಮಕ ಮಾಡಿದೆ.

Share This Article