ಅಟ್ಟಿಕಾ ಗೋಲ್ಡ ಕಂಪನಿ ಮಾಲೀಕನ ಬಂಧನ

khushihost
ಅಟ್ಟಿಕಾ ಗೋಲ್ಡ ಕಂಪನಿ ಮಾಲೀಕನ ಬಂಧನ

ಬೆಂಗಳೂರು: ಅಟ್ಟಿಕಾ ಗೋಲ್ಡ ಕಂಪನಿ ಮಾಲೀಕ ಬಾಬು ಅವರನ್ನು ಆಂಧ್ರ ಪ್ರದೇಶ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.

ಕಳ್ಳರು ಕದ್ದ ಬಂಗಾರವನ್ನು ಖರೀದಿ ಮಾಡುತ್ತಿರುವ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಬಾಬು ಅವರನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಹೈಗ್ರೌಂಡ್ ಠಾಣಾ ವ್ಯಾಪಿಯಲ್ಲಿರುವ ಅಟ್ಟಿಕಾ ಗೋಲ್ಡ್ ಬಾಬು ನಿವಾಸದಲ್ಲಿ ಸಿಸಿಬಿ ಪೊಲೀಸರ ಸಹಾಯದೊಂದಿಗೆ ಆಂಧ್ರ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಆರೋಪಿಯನ್ನು ವಿಚಾರಣೆಗಾಗಿ ಬಂಧಿಸಿ ಆಂಧ್ರಪ್ರದೇಶಕ್ಕೆ ಕರೆದೊಯ್ದಿದ್ದಾರೆ ಎಂದು ತಿಳಿದುಬಂದಿದೆ.

Share This Article