ಚುಡಾಯಿಸಿದ ಯುವಕನನ್ನು ಕಂಬಕ್ಕೆ ಕಟ್ಟಿಹಾಕಿ ಥಳಿಸಿದ ಗ್ರಾಮಸ್ಥರು; ಪೋಕ್ಸೊ ಪ್ರಕರಣ

khushihost
ಚುಡಾಯಿಸಿದ ಯುವಕನನ್ನು ಕಂಬಕ್ಕೆ ಕಟ್ಟಿಹಾಕಿ ಥಳಿಸಿದ ಗ್ರಾಮಸ್ಥರು; ಪೋಕ್ಸೊ ಪ್ರಕರಣ

ಮಂಗಳೂರು: ಬಾಲಕಿಯನ್ನು ಚುಡಾಯಿಸಿದ ಯುವಕನನ್ನು ಹಿಡಿದು ಪೋಷಕರು ಹಾಗೂ ಗ್ರಾಮಸ್ಥರು ಕಂಬಕ್ಕೆ ಕಟ್ಟಿಹಾಕಿ ಥಳಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಕರೆನಾಡು ಪ್ರದೇಶದ ಯುವಕ ಪ್ರತಿದಿನ ಬಾಲಕಿಯೊಬ್ಬಳಿಗೆ ಕಿರುಕುಳ ನೀಡುತ್ತಿದ್ದ. ಬೈಕ್ ನಲ್ಲಿ ಹಿಂಬಾಲಿಸಿಕೊಂಡು ಬರುತ್ತಿದ್ದ ಎನ್ನಲಾಗಿದೆ. ಈ ಬಗ್ಗೆ ಬಾಲಕಿ ಪೋಷಕರಿಗೆ ಹೇಳಿದ್ದಳು. ಯುವಕನನ್ನು ಹಿಡಿದ ಪೋಷಕರು, ಜನರು ಆತನನ್ನು ಕಂಬಕ್ಕೆ ಕಟ್ಟಿಹಾಕಿ ಮನ ಬಂದಂತೆ ಹೊಡೆದ ಬಳಿಕ ಯುವಕನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಆರೋಪಿ ಯುವಕನ ವಿರುದ್ಧ ಮುಲ್ಕಿ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.

Share This Article