ಪ್ರತಿಭಟನಾ ಸ್ಥಳಕ್ಕೆ ಗೃಹ ಸಚಿವರ ಭೇಟಿ

khushihost
ಪ್ರತಿಭಟನಾ ಸ್ಥಳಕ್ಕೆ ಗೃಹ ಸಚಿವರ ಭೇಟಿ

ಬೆಳಗಾವಿ, ೧೯- ರಾಜ್ಯ ವಿಧಾನಸಭೆ ಅಧಿವೇಶನ ನಡೆಯುತ್ತಿರುವ ಬೆಳಗಾವಿ ಸುವರ್ಣ ವಿಧಾನಸೌಧದ ಬಳಿ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಧರಣಿ ನಡೆಸುತ್ತಿರುವ ರೈತರನ್ನು ಸೋಮವಾರ ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿಯಾಗಿ ಮನವಿ ಸ್ವೀಕರಿಸಿದರು.

ರೈತರ ಅಹವಾಲುಗಳನ್ನು ಆಲಿಸಿ, ಬೇಡಿಕೆಗಳನ್ನು ಪರಿಶೀಲಿಸುವ ಬಗ್ಗೆ ಭರವಸೆ ನೀಡಿದರು. ಅದರಂತೆ ಧರಣಿ ಹಿಂಪಡೆಯುವಂತೆ ಅವರು ವಿನಂತಿಸಿದರು.

ಪೊಲೀಸ್ ಆಯುಕ್ತ ಬೋರಲಿಂಗಯ್ಯ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.

Share This Article