ರಾಮ ಮಂದಿರದ ಮೇಲೆ ಮುಸ್ಲಿಂ ಧ್ವಜ ಎಡಿಟ್ ಮಾಡಿದ ಯುವಕನ ಬಂಧನ

khushihost
ರಾಮ ಮಂದಿರದ ಮೇಲೆ ಮುಸ್ಲಿಂ ಧ್ವಜ ಎಡಿಟ್ ಮಾಡಿದ ಯುವಕನ ಬಂಧನ

ಗದಗ, 22:  ಯುವಕನೊಬ್ಬ ಅಯೋಧ್ಯೆ ರಾಮ ಮಂದಿರದ ಮೇಲೆ ಹಸಿರು ಬಾವುಟ ಹಾರಿಸಿರುವಂತೆ ಫೋಟೋ ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದು ಗಜೇಂದ್ರಗಡ ಪೊಲೀಸರು ಓರ್ವನನ್ನು ಬಂಧಿಸಿದ್ದಾರೆ.

ಜಿಲ್ಲೆಯ ಗಜೇಂದ್ರಗಡ ಪಟ್ಟಣದಲ್ಲಿ ಅಯೋಧ್ಯೆ ರಾಮ ಮಂದಿರದಲ್ಲಿ ರಾಮನ ಪ್ರಾಣಪ್ರತಿಷ್ಠಾಪನೆಗೆ ಕ್ಷಣಗಣನೆ ಇರುವಾಗ ರಾಮ ಮಂದಿರದ ಮೇಲೆ ಹಸಿರು ಬಾವುಟ ಹಾಕಿರುವ ಚಿತ್ರ ಫೇಸಬುಕ್‌ನಲ್ಲಿ ಫೋಸ್ಟ್ ಮಾಡಲಾಗಿತ್ತು. ಸುದ್ಧಿ ತಿಳಿಯುತ್ತಿದ್ದಂತೆ ಗಜೇಂದ್ರಗಡ ಪೊಲೀಸರು ತಾಜುದ್ದೀನ ದಫೇದಾ‌ರ್ ಎಂಬಾತನನ್ನು ಬಂಧಿಸಿದ್ದಾರೆ.

ಬಜರಂಗದಳ ಸೇರಿ ವಿವಿಧ ಸಂಘಟನೆಗಳ ಕಾರ್ಯಕರ್ತರು ತಡರಾತ್ರಿ ಪೊಲೀಸ್ ಠಾಣೆಗೆ ದೌಡಾಯಿಸಿ ಯುವಕನಿಗೆ ತರಾಟೆಗೆ ತೆಗೆದುಕೊಂಡರು. ಯುವಕನ ವಿರುದ್ಧ ಎಫ್‌ಐಆರ್ ದಾಖಲಾಗಿದೆ ಎಂದು ಪಿಎಸ್‌ಐ ಸೋಮನಗೌಡರ್ ಮಾಹಿತಿ ನೀಡಿದ್ದಾರೆ.

Share This Article