ಧ್ವಜಾರೋಹಣ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವಿಜಯಪುರ ಗ್ರಾಮ ಪಂಚಾಯತ್ ಅಧ್ಯಕ್ಷೆಗೆ ಗುಂಡೇಟು

khushihost
ಧ್ವಜಾರೋಹಣ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವಿಜಯಪುರ ಗ್ರಾಮ ಪಂಚಾಯತ್ ಅಧ್ಯಕ್ಷೆಗೆ ಗುಂಡೇಟು

ಇಂಡಿ, ೨೬:  ಗಣರಾಜ್ಯೋತ್ಸವ ಆಚರಣೆ ಸಂದರ್ಭದಲ್ಲಿ ರಾಷ್ಟ್ರ ಧ್ವಜಾರೋಹಣದ ವೇಳೆ ವ್ಯಕ್ತಿಯೊಬ್ಬ ಗುಂಡು ಹಾರಿಸಿದ್ದು, ವೇದಿಕೆಯಲ್ಲಿದ್ದ ಗ್ರಾಮ ಪಂಚಾಯತ್ ಅಧ್ಯಕ್ಷೆ ಗಾಯಗೊಂಡಿರುವ ಘಟನೆ ವಿಜಯಪುರ ಜಿಲ್ಲೆ ಇಂಡಿ ತಾಲೂಕಿನಲ್ಲಿ ಜರುಗಿದೆ.

ಇಂಡಿ ತಾಲೂಕಿನ ಹಿರೇರೂಗಿ ಗ್ರಾಮದಲ್ಲಿ ನಡೆದ ಗಣರಾಜ್ಯೋತ್ಸವ ಸಮಾರಂಭದ ಸಂದರ್ಭದಲ್ಲಿ ಕನ್ನಡ ಪರ ಸಂಘಟನೆಯ ಯುವಕ ಮಲ್ಲು ಗಿನ್ನಿ ಎಂಬಾತ ಗಾಳಿಯಲ್ಲಿ ಗುಂಡು ಹಾರಿಸಿದ್ದಾನೆ‌. ಗಾಳಿಯಲ್ಲಿ ಹಾರಿಸಿದ ಗುಂಡು ವೇದಿಕೆಯಲ್ಲಿದ್ದ ಗ್ರಾಮ ಪಂಚಾಯತಿ ಆಧ್ಯಕ್ಷೆ ಶೋಭಾ ಹೊಸಮನಿಯವರ ತೊಡೆಗೆ ತಾಗಿ ಅವರು ಗಾಯಗೊಂಡಿದ್ದಾರೆ. ಕೂಡಲೇ ಸೋಮವ್ವ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸುದ್ದಿ ತಿಳಿಯುತ್ತಲೇ ಇಂಡಿ ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಗುಂಡು ಹಾರಿಸಿದ ಪ್ರಕರಣದ ಕುರಿತು ವಿಚಾರಣೆ ನಡೆಸಿದ್ದಾರೆ.

Share This Article