25 ಮತ್ತು 26ರಂದು ಬೆಳಗಾವಿ ಜಿಲ್ಲೆಯ ಆರು ತಾಲೂಕುಗಳ ಶಾಲೆಗಳಿಗೆ ರಜೆ ಘೋಷಣೆ

khushihost
25 ಮತ್ತು 26ರಂದು ಬೆಳಗಾವಿ ಜಿಲ್ಲೆಯ ಆರು ತಾಲೂಕುಗಳ ಶಾಲೆಗಳಿಗೆ ರಜೆ ಘೋಷಣೆ

ಬೆಳಗಾವಿ, ಜುಲೈ ೨೪: ಬೆಳಗಾವಿ ಜಿಲ್ಲೆಯಲ್ಲಿ ಸತತ ವ್ಯಾಪಕ ಮಳೆಯ ಅಗುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ, ಖಾನಾಪುರ, ಬೈಲಹೊಂಗಲ, ಕಿತ್ತೂರು, ಚಿಕ್ಕೋಡಿ ಮತ್ತು ನಿಪ್ಪಾಣಿ ತಾಲೂಕುಗಳ ಎಲ್ಲಾ ಅಂಗನವಾಡಿ ಕೇಂದ್ರ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಜುಲೈ 25 ಮತ್ತು 26ರಂದು ಎರಡು ದಿನ ಜಿಲ್ಲಾಧಿಕಾರಿ ಮೊಹ್ಮದ ರೋಷನ್‌ ಅವರು ಆದೇಶ ಹೊರಡಿಸಿದ್ದಾರೆ.

ಅಲ್ಲದೇ  ಬೆಳಗಾವಿ, ಖಾನಾಪುರ, ಬೈಲಹೊಂಗಲ, ಕಿತ್ತೂರು ತಾಲೂಕುಗಳ ಪದವಿಪೂರ್ವ ಕಾಲೇಜುಗಳಿಗೂ ಸಹ 25 ಮತ್ತು 26ರಂದು ಎರಡು ದಿನ ರಜೆ ನೀಡಲಾಗಿದೆ.

Share This Article