ಮಂಗಳವಾರ ಶಾಲೆಗಳಿಗೆ ರಜೆ ಘೋಷಣೆ

khushihost
ಮಂಗಳವಾರ ಶಾಲೆಗಳಿಗೆ ರಜೆ ಘೋಷಣೆ

ಬೆಳಗಾವಿ : ರಾಷ್ಟ್ರಪಿತ ಮಹಾತ್ಮಾ ಗಾಂಧಿ ಅವರು 100 ವರ್ಷಗಳ ಹಿಂದೆ ಬೆಳಗಾವಿಗೆ ಭೇಟಿ ನೀಡಿದ ನೆನಪಿನಲ್ಲಿ ನಡೆದಿರುವ ಕಾಂಗ್ರೆಸ್ ಅಧಿವೇಶನ ಹಿನ್ನಲೆಯಲ್ಲಿ ಬೆಳಗಾವಿ ನಗರ, ಬೆಳಗಾವಿ ಗ್ರಾಮೀಣ ಹಾಗೂ ಬೆಳಗಾವಿ ತಾಲೂಕಿನ ಎಲ್ಲಾ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ, ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಮೊಹಮ್ಮದ ರೋಷನ್ ಆದೇಶ ಹೊರಡಿಸಿದ್ದಾರೆ.

ಲಕ್ಷಾಂತರ ಜನರು, ಗಣ್ಯರು ಸಮಾವೇಶದಲ್ಲಿ ಭಾಗವಹಿಸುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

Share This Article