ಕಂಡಕ್ಟರ್ ಮೇಲೆ ಹಾಕಿದ್ದ ಪೋಕ್ಸೋ ಪ್ರಕರಣ ವಾಪಸ್

khushihost
ಕಂಡಕ್ಟರ್ ಮೇಲೆ ಹಾಕಿದ್ದ ಪೋಕ್ಸೋ ಪ್ರಕರಣ ವಾಪಸ್

ಬೆಳಗಾವಿ: ಕಂಡಕ್ಟರ್ ಮೇಲೆ ನಡೆದ ಹಲ್ಲೆ ಪ್ರಕರಣದಲ್ಲಿ ಕಂಡಕ್ಟರ್ ವಿರುದ್ಧವೇ ದಾಖಲಿಸಿದ್ದ ಪೋಕ್ಸೋ ಪ್ರಕರಣಕ್ಕೆ ಹೊಸ ತಿರುವು ಬಂದಿದ್ದು, ಅಪ್ರಾಪ್ತ ಬಾಲಕಿಯ ಪೋಷಕರು ವಿಡಿಯೋ ಹೇಳಿಕೆಯೊಂದನ್ನು ಬಿಡುಗಡೆ ಮಾಡಿದ್ದಾರೆ.

ವಿಡಿಯೋ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಬೆಳಗಾವಿಯಿಂದ ಬಾಳೇಕುಂದ್ರಿಗೆ ಬರುತ್ತಿದ್ದಾಗ ಟಿಕೆಟ್ ಸಂಬಂಧ ಆಗಿರುವ ಜಗಳ ಇದು. ಇದನ್ನು ಕನ್ನಡ, ಮರಾಠಿ ಎಂದು ಪ್ರಚಾರ ಮಾಡಲಾಗುತ್ತಿದೆ. ನಾವು ಕನ್ನಡ ಅಭಿಮಾನಿಗಳು, ನಮ್ಮಲ್ಲಿ ಭೇದಭಾವ ಇಲ್ಲ. ವಿನಾಕಾರಣ ಕನ್ನಡ, ಮರಾಠಿ ಎಂದು ಸುಳ್ಳು ಪ್ರಚಾರ ಮಾಡ್ತಿದ್ದಾರೆ. ಇದನ್ನು ಮುಂದಿಟ್ಟುಕೊಂಡು ಕರ್ನಾಟಕ, ‌ಮಹಾರಾಷ್ಟ್ರ ನಡುವೆ ಜಗಳ ಆರಂಭವಾಗಿದೆ ಎಂದಿದ್ದಾರೆ.

ನಮ್ಮ ಮಗಳಿಗೆ ಅನ್ಯಾಯವಾಗಿದೆ. ನಾವು ಪ್ರಕರಣ ವಾಪಸ್ ಪಡೆಯುತ್ತೇವೆ, ಇದನ್ನು ಇಲ್ಲಿಗೆ ನಿಲ್ಲಿಸಿ. ಪ್ರಕರಣವನ್ನು ಸ್ವ ಇಚ್ಛೆಯಿಂದ ವಾಪಸ್ ಪಡೆಯುತ್ತಿದ್ದೇವೆ.‌ ನಮ್ಮ ಮೇಲೆ ಯಾವುದೇ ಒತ್ತಡ ಇಲ್ಲ ಎಂದು ಅವರು ಹೇಳಿದ್ದಾರೆ.

Share This Article