ಮನೆ ಮೇಲೆ ಬಿದ್ದ ಬಸ್!

khushihost
ಮನೆ ಮೇಲೆ ಬಿದ್ದ ಬಸ್!

ಚಿಕ್ಕಮಗಳೂರು, 10:  ಕೆಎಸ್ ಆರ್ ಟಿಸಿ ಬಸ್ಸು ರಸ್ತೆ ಪಕ್ಕದ ಮನೆಯ ಮೇಲೆ ಬಿದ್ದಿದ್ದರಿಂದ ಸುಮಾರು 20 ಮಂದಿಗೆ ಗಾಯಗಳಾಗಿವೆ.

ಕೊಪ್ಪ ತಾಲೂಕಿನ ಜಲದುರ್ಗ ಬಳಿ ಚಾಲಕನ ನಿಯಂತ್ರಣ ತಪ್ಪಿ ಈ ಅವಘಡ ಸಂಭವಿಸಿದ್ದು ಘಟನೆಯಲ್ಲಿ ಸುಮಾರು 20 ಮಂದಿಗೆ ಗಾಯಗಳಾಗಿವೆ ಎನ್ನಲಾಗಿದೆ. ಗಾಯಾಳುಗಳನ್ನು ಜಯಪುರ ಮತ್ತು ಕೊಪ್ಪ ಆಸ್ಪತ್ರೆಗೆ ದಾಖಲಿಸಲಾಗಿದೆ.

50 ಮಂದಿ ಪ್ರಯಾಣಿಕರಿದ್ದ ಸರ್ಕಾರಿ ಬಸ್ ಬೆಂಗಳೂರಿನಿಂದ ಶೃಂಗೇರಿಗೆ ಬರುತ್ತಿತ್ತು. ಕೊಪ್ಪ ತಾಲೂಕಿನ ಜಲದುರ್ಗ ತಲುಪುತ್ತಿದ್ದಂತೆ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಮನೆಯ ಮೇಲೆ ಪಲ್ಟಿಯಾಗಿದೆ. ಈ ಸಂಬಂಧ ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article