ಬೆಳಗಾವಿ: ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದ ಪ್ರಯುಕ್ತ ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ ವತಿಯಿಂದ ಸೆ.17 ರಂದು ಬೆಳಗ್ಗೆ 10 ಗಂಟೆಗೆ ಧರ್ಮನಾಥ ಸರ್ಕಲ್ ಹತ್ತಿರ ಇರುವ ಬಿಜೆಪಿ ಗ್ರಾಮಾಂತರ ಜಿಲ್ಲಾ ಕಾರ್ಯಾಲಯದಲ್ಲಿ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿದೆ. ಪಕ್ಷದ ಕಾರ್ಯಕರ್ತರು, ಮೋದಿಜಿಯವರ ಅಭಿಮಾನಿಗಳು ರಕ್ತದಾನ ಶಿಬಿರದಲ್ಲಿ ಭಾಗವಹಿಸಿ ರಕ್ತದಾನ ಮಾಡಿ ತುರ್ತು ಅವಶ್ಯಕತೆ ಇರುವ ರೋಗಿಗಳ ಜೀವ ಉಳಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿಜಿ ಅವರ ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸೋಣ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಜನ್ಮದಿನದ ನಿಮಿತ್ತ ಬಿಜೆಪಿ ವತಿಯಿಂದ ರಕ್ತದಾನ ಶಿಬಿರ ಆಯೋಜನೆ – ಬಿಜೆಪಿ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ


