ಎಂಇಎಸ್ ಸಭೆಗೆ ನುಗ್ಗಲು ಯತ್ನಿಸಿದ ಕನ್ನಡ ಕಾರ್ಯಕರ್ತರ ಬಂಧನ

khushihost
ಎಂಇಎಸ್ ಸಭೆಗೆ ನುಗ್ಗಲು ಯತ್ನಿಸಿದ ಕನ್ನಡ ಕಾರ್ಯಕರ್ತರ ಬಂಧನ

ಬೆಳಗಾವಿ: ಪೊಲೀಸರಿಂದ ಕರಾಳ ದಿನಾಚರಣೆಗೆ ಅನುಮತಿ ಇಲ್ಲದೇ ಇದ್ದರೂ ಎಂಇಎಸ್ ಬೆಳಗಾವಿಯಲ್ಲಿ ಪ್ರತಿ ವರ್ಷ ಕರಾಳ ದಿನಾಚರಣೆ ಆಚರಿಸುತ್ತ ಬರುತ್ತಿದೆ. ಕರಾಳ ದಿನಾಚರಣೆ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್)ಯವರು ಶನಿವಾರ ಮಧ್ಯಾಹ್ನ ಸಭೆ ನಡೆಸಲಿದ್ದ ಮರಾಠಾ ಮಂಗಲ ಕಾರ್ಯಾಲಯಕ್ಕೆ ನುಗ್ಗಲು ಯತ್ನಿಸಿದ 50ಕ್ಕೂ ಅಧಿಕ  ಕನ್ನಡ ಸಂಘಟನೆಗಳ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.

ಮುಖಂಡರಾದ ಮಹಾದೇವ ತಳವಾರ, ವಾಜೀದ ಹಿರೇಕೋಡಿ ನೇತೃತ್ವದಲ್ಲಿ ಕನ್ನಡ ಹೋರಾಟಗಾರರು ಗೋಗಟೆ ವೃತ್ತದ ಮೂಲಕ ಮರಾಠಾ ಮಂಗಲ ಕಾರ್ಯಾಲಯಕ್ಕೆ ತೆರಳಲು ಮುಂದಾದಾಗ ಪೊಲೀಸರು 20 ಕ್ಕೂ ಅಧಿಕ ಕಾರ್ಯಕರ್ತರನ್ನು ತಡೆದರು. ಈ ಸಂದರ್ಭದಲ್ಲಿ ಪರಸ್ಪರರ ಮಧ್ಯೆ ತಳ್ಳಾಟ, ನೂಕಾಟ ನಡೆಯಿತು.

Share This Article