ಬೈಕ್ ವಿದ್ಯುತ್ ಕಂಬಕ್ಕೆ ಡಿಕ್ಕಿ, ಕೆ ಎಲ್ ಇ ಇಂಜಿನಿಯರಿಂಗ್ ವಿದ್ಯಾರ್ಥಿ ಮೃತ್ಯು

khushihost
ಬೈಕ್ ವಿದ್ಯುತ್ ಕಂಬಕ್ಕೆ ಡಿಕ್ಕಿ, ಕೆ ಎಲ್ ಇ ಇಂಜಿನಿಯರಿಂಗ್ ವಿದ್ಯಾರ್ಥಿ ಮೃತ್ಯು

ಬೆಳಗಾವಿ: ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಬೈಕ್‌ ಡಿಕ್ಕಿ ಹೊಡೆದ ಪರಿಣಾಮ ಕೆಎಲ್‌ಇ ಇಂಜಿನಿಯರಿಂಗ್‌ ಕಾಲೇಜಿನ ವಿದ್ಯಾರ್ಥಿಯೊಬ್ಬ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದ ವಿಶ್ವೇಶ್ವರಯ್ಯ ಬಡಾವಣೆ ಬಳಿ ನಡೆದಿದೆ.

ಮೂವರು ವಿದ್ಯಾರ್ಥಿಗಳು ಕಾಲೇಜು ಮುಗಿಸಿಕೊಂಡು ಒಂದೇ ಬೈಕ್‌ನಲ್ಲಿ ಮನೆಗೆ ತೆರಳುವಾಗ ಈ ದುರ್ಘಟನೆ ಸಂಭವಿಸಿದೆ

ಬೈಕ್ ಸವಾರ ವಿದ್ಯಾರ್ಥಿ ಸಮರ್ಥ ಸುಖದೇವ ಅಪ್ಪಾಜಿಗೋಳ (20) ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾರೆ. ಮೃತ ಸಮರ್ಥ ಚಿಂಚಣಿ ಗ್ರಾಮದವರಾಗಿದ್ದು, ಕೆಎಲ್‌ಇ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಯಾಗಿದ್ದರು.

ಅವರೊಂದಿಗೆ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ಅರವಿಂದ ಶಂಕರ ಮ್ಯಾಗೇರಿ (19) ಹಾಗೂ ಖಡಕಲಾಟ ಗ್ರಾಮದ ಸಚಿನ ಮಹೇಶ ಬಡಕೆ (19) ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Share This Article