ಪೊಲೀಸರಿಂದ ತಪ್ಪಿಸಿಕೊಳ್ಳುವ ಗಡಿಬಿಡಿಯಲ್ಲಿ 3ನೇ ಮಹಡಿಯಿಂದ ಬಿದ್ದು ಆರೋಪಿ ಸಾವು 

khushihost
ಪೊಲೀಸರಿಂದ ತಪ್ಪಿಸಿಕೊಳ್ಳುವ ಗಡಿಬಿಡಿಯಲ್ಲಿ 3ನೇ ಮಹಡಿಯಿಂದ ಬಿದ್ದು ಆರೋಪಿ ಸಾವು 

ಕಲಬುರಗಿ: ಪೊಲೀಸರಿಂದ ತಪ್ಪಿಸಿಕೊಳ್ಳುವ ಭರದಲ್ಲಿ ನಗರದ ಜಿಲ್ಲಾ ಆಸ್ಪತ್ರೆಯ ಮೂರನೇ ಮಹಡಿಯಿಂದ ಬಿದ್ದು ಆರೋಪಿಯೊಬ್ಬ ಮೃತಪಟ್ಟ ಘಟನೆ ನಡೆದಿದೆ.

ಮುನ್ನಾ ಅಲಿಯಾಸ್ ಶೇಖ ಸೋಹೆಲ್ ಮೃತ ಆರೋಪಿ. ದರೋಡೆ ಪ್ರಕರಣದಲ್ಲಿ ಈತನನ್ನು ಬ್ರಹ್ಮಪೂರ ಪೊಲೀಸರು ಕೋರ್ಟ​ಗೆ ಹಾಜರಿಪಡಿಸುವ ಪೂರ್ವದಲ್ಲಿ ಕೋವಿಡ್ ತಪಾಸಣೆ ಅಗತ್ಯವಾಗಿತ್ತು.

ಈ ಹಿನ್ನೆಲೆಯಲ್ಲಿ ಈತನನ್ನು ತಪಾಸಣೆಗೆಂದು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಕೋವಿಡ್ ತಪಾಸಣೆ ವೇಳೆ ಪೊಲೀಸರಿಂದ ತಪ್ಪಿಸಿಕೊಳ್ಳಲು ಆತ ಯತ್ನಿಸಿದ್ದ.

ಆಸ್ಪತ್ರೆಯ ಮೂರನೇ ಮಹಡಿ ಹತ್ತಿ ತಪ್ಪಿಸಿಕೊಳ್ಳುವ ವೇಳೆ ಕೆಳಗೆ ಬಿದ್ದು ಮೃತಪಟ್ಟಿದ್ದಾನೆ ಎಂದು ಹೇಳಲಾಗಿದೆ. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳ ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ.

Share This Article