ಅಗಸ್ಟ 31ರಂದು ಮಾಂಸ ಮಾರಾಟ ನಿಷೇಧ 

khushihost
ಅಗಸ್ಟ 31ರಂದು ಮಾಂಸ ಮಾರಾಟ ನಿಷೇಧ 

ಬೆಳಗಾವಿ : ಬೆಳಗಾವಿ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಬರುವ ಎಲ್ಲ ಕಸಾಯಿಖಾನೆ ಹಾಗೂ ಮಾಂಸ ಮಾರಾಟದ ಅಂಗಡಿಗಳನ್ನು ಗಣೇಶ ಚತುರ್ಥಿ ನಿಮಿತ್ಯ ಬುಧವಾರ (ಆ.31) ಬಂದ್ ಮಾಡುವಂತೆ ಮಹಾನಗರ ಪಾಲಿಕೆ ಆಯುಕ್ತರು ಆದೇಶ ಹೊರಡಿಸಿದ್ದಾರೆ.

ಸದರಿ ಅಂಗಡಿ ಮಾಲೀಕರು ಆದೇಶವನ್ನು ಉಲ್ಲಂಘನೆ ಮಾಡಿರುವದು ಕಂಡು ಬಂದಲ್ಲಿ ಅಂತಹ ಅಂಗಡಿ ಮಾಲಿಕರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಬೆಳಗಾವಿ ಮಹಾನಗರ ಪಾಲಿಕೆ ಆಯುಕ್ತ ರುದ್ರೇಶ ಘಾಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article