ಈದ್ಗಾ ಮೈದಾನದಲ್ಲಿ ಗಣೇಶೋತ್ಸವ : ಸುಪ್ರೀಂನಲ್ಲಿಂದು ಅರ್ಜಿ ವಿಚಾರಣೆ 

khushihost
ಈದ್ಗಾ ಮೈದಾನದಲ್ಲಿ ಗಣೇಶೋತ್ಸವ : ಸುಪ್ರೀಂನಲ್ಲಿಂದು ಅರ್ಜಿ ವಿಚಾರಣೆ 

ಹೊಸದಿಲ್ಲಿ, ೩೦- : ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಿಸಲು ಅನುಮತಿ ನೀಡುವಂತೆ ಕರ್ನಾಟಕ ಹೈಕೋರ್ಟ ಆದೇಶವನ್ನು ಪ್ರಶ್ನಿಸಿ ಸುಪ್ರೀಮ ಕೋರ್ಟಗೆ ಕರ್ನಾಟಕ ವಕ್ಫ ಮಂಡಳಿ ಮೇಲ್ಮನವಿ ಸಲ್ಲಿಸಿದ್ದು, ಇಂದು ಅರ್ಜಿ ವಿಚಾರಣೆ ನಡೆಯಲಿದೆ.

ವಕ್ಫ ಮಂಡಳಿಯ ಪರವಾಗಿ ಹಿರಿಯ ವಕೀಲ ಕಪಿಲ್ ಸಿಬಲ್ ಅವರು ಸಲ್ಲಿಸಿದ್ದ ತುರ್ತು ಮನವಿಯನ್ನು ಮುಖ್ಯ ನ್ಯಾಯಮೂರ್ತಿ ಉದಯ ಉಮೇಶ ಲಲಿತ ಅವರು ಸೋಮವಾರ ಪುರಸ್ಕರಿಸಿದ ನಂತರ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಉದ್ದೇಶಿತ ಗಣೇಶೋತ್ಸವ ಆಚರಣೆಯ ವಿರುದ್ಧ ಕರ್ನಾಟಕ ವಕ್ಫ ಮಂಡಳಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಮ ಕೋರ್ಟ ವಿಚಾರಣೆ ನಡೆಸಲಿದೆ.

ಆಗಸ್ಟ್ 31ರಂದು ಗಣೇಶ ಹಬ್ಬ ಇರುವುದರಿಂದ ಈ ವಿಚಾರವನ್ನು ತುರ್ತಾಗಿ ವಿಚಾರಣೆಗೆ ಪರಿಗಣಿಸುವಂತೆ ಹಿರಿಯ ವಕೀಲ ಕಪಿಲ್ ಸಿಬಲ್ ಮನವಿ ಮಾಡಿದ್ದರು. ಮನವಿ ಪುರಸ್ಕರಿಸಿದ ನ್ಯಾಯಪೀಠವು ವಿಚಾರಣೆಗೆ ಸಮ್ಮತಿಸಿದೆ.

Share This Article