ಭೀಕರವಾಗಿ ಕೊಲೆಯಾದ 28 ವರ್ಷದ ಯುವಕ 

khushihost
ಭೀಕರವಾಗಿ ಕೊಲೆಯಾದ 28 ವರ್ಷದ ಯುವಕ 

ಯಮಕನಮರಡಿ: ಯುವಕನೊಬ್ಬನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಕೊಲೆಗೈದಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಯಮಕನಮರಡಿ ಗ್ರಾಮದ ಹೊರವಲಯದಲ್ಲಿ ನಡೆದಿದೆ.

ವಿನಾಯಕ ಹೋರಕೇರಿ (28) ಕೊಲೆಯಾದ ದುರ್ದೈವಿ ಎಂದು ಗುರುತಿಸಲಾಗಿದೆ.

ಬೈಕ್‌ನಲ್ಲಿ ಗ್ರಾಮಕ್ಕೆ ಮರಳುವಾಗ ಹಿಂಬಾಲಿಸಿ ಬಂದ ದುಷ್ಕರ್ಮಿಗಳು ಮನಬಂದಂತೆ ಹಲ್ಲೆ ಮಾಡಿದ್ದಾರೆ. ತೀವ್ರ ರಕ್ತಸ್ರಾವದಿಂದ ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಶನಿವಾರವಷ್ಟೇ ಯುವಕ ಹುಟ್ಟುಹಬ್ಬ ಆಚರಿಸಿಕೊಂಡಿದ್ದ ಎಂದು ತಿಳಿದುಬಂದಿದೆ.

ಇನ್ನು ಕಳೆದ ವರ್ಷ ಸತೀಶ ಜಾರಕಿಹೊಳಿ ಆಪ್ತರೊಬ್ಬರ ಮೇಲೆ ಕೊಲೆಯಾದ ಯುವಕ ನಾಡಪಿಸ್ತೂಲಿನಿಂದ ಫೈರಿಂಗ್ ಮಾಡಿ ಪರಾರಿಯಾಗಿದ್ದನಂತೆ. ಇದಾಗಿ ಕೆಲ ತಿಂಗಳ ಹಿಂದೆ ಜಾಮೀನಿನ ಮೇಲೆ ಹೊರಗೆ ಬಂದಿದ್ದ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಘಟನಾ ಸ್ಥಳಕ್ಕೆ ಯಮಕನಮರಡಿ ಪಿಎಸ್‌ಐ ಬಿ.ವಿ.ನಾಮ ಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share This Article