ಹಳ್ಳದಲ್ಲಿ ಕೊಚ್ಚಿಹೋದ ಇಬ್ಬರು ಪೊಲೀಸರು 

khushihost
ಹಳ್ಳದಲ್ಲಿ ಕೊಚ್ಚಿಹೋದ ಇಬ್ಬರು ಪೊಲೀಸರು 

ಕೊಪ್ಪಳ: ಗಜೇಂದ್ರಗಡಕ್ಕೆ ಬಂದೋಬಸ್ತ್​​ಗೆ ತೆರಳಿದ್ದ ಇಬ್ಬರು ಪೊಲೀಸ್ ಕಾನ್ಸಟೇಬಲ್​ಗಳು ಹಳ್ಳದಲ್ಲಿ ಕೊಚ್ಚಿ ಹೋದ ಘಟನೆ ಯಲಬುರ್ಗಾ ತಾಲೂಕಿನ ಬಂಡಿಹಾಳ ಗ್ರಾಮದ ಬಳಿ ನಡೆದಿದೆ.

ರೈತರ ಪ್ರತಿಭಟನೆ ಹಿನ್ನೆಲೆ ಭದ್ರತೆಗೆ ತೆರಳಿದ್ದ ಪೊಲೀಸ್ ಸಿಬ್ಬಂದಿ ಮಹೇಶ ಮತ್ತು ನಿಂಗಪ್ಪ ಅವರು ಹಿಂದಿರುಗುವಾಗ ಹಳ್ಳದಲ್ಲಿ ಕೊಚ್ಚಿಹೋಗಿದ್ದಾರೆ. ಸದ್ಯ ಇಬ್ಬರ ಹುಡುಕಾಟದಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿ ನಿರತರಾಗಿದ್ದಾರೆ.

ಗಜೇಂದ್ರಗಡದಲ್ಲಿ ರೈತರು ಪ್ರತಿಭಟನೆ ಹಮ್ಮಿಕೊಂಡಿದ್ದರು. ಭದ್ರತೆ ಒದಗಿಸುವ ನಿಟ್ಟಿನಲ್ಲಿ ಮುಂಡರಗಿ ಪೊಲೀಸ್ ಠಾಣೆಯ ಕಾನ್ಸಟೇಬಲ್​ಗಳಾದ ಮಹೇಶ ಹಾಗೂ ನಿಂಗಪ್ಪ ಅವರನ್ನು ಕಳುಹಿಸಲಾಗಿತ್ತು. ಪ್ರತಿಭಟನೆ ಬಳಿಕ ವಾಪಸ್ಸಾಗುತ್ತಿದ್ದ ವೇಳೆ ಇಬ್ಬರು ತಡರಾತ್ರಿ ಹಳ್ಳದಲ್ಲಿ ಸಿಲುಕಿ ಕೊಚ್ಚಿ ಹೋಗಿದ್ದಾರೆ. ಸದ್ಯ ಇಬ್ಬರಿಗಾಗಿ ಶೋಧ ಕಾರ್ಯ ಮುಂದುವರೆದಿದೆ.

Share This Article