ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಸಲು ರಾಜ್ಯ ಸರ್ಕಾರ ಆದೇಶ 

khushihost
ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಸಲು ರಾಜ್ಯ ಸರ್ಕಾರ ಆದೇಶ 

ಬೆಂಗಳೂರು : ಆಹಾರ ಮತ್ತು ನಾಗರಿಕ ಪೂರೈಕೆ ಹಾಗೂ ಅರಣ್ಯ ಖಾತೆ ಸಚಿವ ಉಮೇಶ ಕತ್ತಿ ಅವರು ಮಂಗಳವಾರ ರಾತ್ರಿ ತೀವ್ರ ಹೃದಯಾಘಾತದಿಂದ ನಿಧನ ಹೊಂದಿದ್ದು ಅವರ ಗೌರವಾರ್ಥ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ಕೋವಿಡ್ 19 ಮಾರ್ಗಸೂಚಿಗಳನ್ನು ಪಾಲಿಸಿ ನೇರವೇರಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಇಂದು ರಾಜ್ಯಾದ್ಯಂತ ಶೋಕಾಚರಣೆಯನ್ನು ಘೋಷಿಸಲಾಗಿದ್ದು, ಈ ಅವಧಿಯಲ್ಲಿ ಯಾವುದೇ ಅಧಿಕೃತ ಮನರಂಜನಾ ಕಾರ್ಯಕ್ರಮಗಳು ಇರುವುದಿಲ್ಲ. ಹಾಗೂ ನಿಯತವಾಗಿ ರಾಷ್ಟ್ರಧ್ವಜವನ್ನು ಸರ್ಕಾರದ ಎಲ್ಲ ಕಟ್ಟಡಗಳ ಮೇಲೆ ರಾಷ್ಟ್ರಧ್ವಜವನ್ನು ಅರ್ಧ ಮಟ್ಟದಲ್ಲಿ ಹಾರಿಸಲಾಗುವುದು ಎಂದು ತಿಳಿಸಿದೆ.

ಇನ್ನು ಬೆಳಗಾವಿ ಜಿಲ್ಲೆಯ ಎಲ್ಲಾ ಶಾಲಾ, ಕಾಲೇಜುಗಳು ಮತ್ತು ಸರ್ಕಾರಿ ಕಚೇರಿಗಳಿಗೆ ಇಂದು ರಜೆಯನ್ನು ಘೋಷಣೆ ಮಾಡಲಾಗಿದೆ.

Share This Article