ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ : ಫೋಕ್ಸೋ ಕಾಯ್ದೆಯಡಿ ಹೆಡ್ ಮಾಸ್ಟರ್ ಸೇರಿ ಇಬ್ಬರ ಬಂಧನ

khushihost
ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ : ಫೋಕ್ಸೋ ಕಾಯ್ದೆಯಡಿ ಹೆಡ್ ಮಾಸ್ಟರ್ ಸೇರಿ ಇಬ್ಬರ ಬಂಧನ

ಕಲಬುರಗಿ : ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ವಸತಿ ಶಾಲೆಯ ಮುಖ್ಯ ಗುರುಗಳು ಹಾಗೂ ಕಂಪ್ಯೂಟರ್​​ ಆಪರೇಟರ್​ ವಿರುದ್ಧ ದೂರು ದಾಖಲಾಗಿರುವ ಘಟನೆ ಚಿಂಚೋಳಿ ತಾಲೂಕಿನಲ್ಲಿ ನಡೆದಿದೆ.

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ವಿದ್ಯಾರ್ಥಿಗಳ ಆರೋಪದ ಬಗ್ಗೆ ಮಾಹಿತಿ ಪಡೆದ ಸಮಾಜ ಕಲ್ಯಾಣ ಇಲಾಖೆಯ ಚಿಂಚೋಳಿ ತಾಲ್ಲೂಕಿನ ಸಹಾಯಕ ನಿರ್ದೇಶಕರು ಶಾಲೆಯ ಪ್ರಾಚಾರ್ಯ ಮತ್ತು ಕಂಪ್ಯೂಟರ್ ಶಿಕ್ಷಕನ ವಿರುದ್ದ ಕುಂಚಾವರಂ ಠಾಣೆಗೆ ದೂರು ನೀಡಿದ್ದಾರೆ.

ಇಬ್ಬರ ವಿರುದ್ಧವೂ ಪೊಕ್ಸೊ, ಅಟ್ರಾಸಿಟಿ ಕಾಯ್ದೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು ಕುಂಚಾವರಂ ಠಾಣೆಯ ಪೊಲೀಸರು ಅವರನ್ನು ಬಂಧಿಸಿದ್ದಾರೆ.

Share This Article