ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರಗೆ ಮತ್ತೆ ಇಡಿ ಸಮನ್ಸ್ 

khushihost
ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರಗೆ ಮತ್ತೆ ಇಡಿ ಸಮನ್ಸ್ 

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಅವರಿಗೆ ಜಾರಿ ನಿರ್ದೇಶನಾಲಯ ಮತ್ತೆ ಸಮನ್ಸ್ ಜಾರಿಗೊಳಿಸಿದ್ದು, ಈ ಬಗ್ಗೆ ಡಿ.ಕೆ.ಶಿವಕುಮಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸೆ 19ರಂದು ವಿಚಾರಣೆ ಹಾಜರಾಗುವಂತೆ ಇಡಿ ಸಮನ್ಸ್‌ ನೀಡಿದೆ ಎಂದು ಟ್ವೀಟ್‌ ಮಾಡುವ ಮೂಲಕ ಡಿ.ಕೆ.ಶಿವಕುಮಾರ‌ ಅಸಮಧಾನ ವ್ಯಕ್ತಪಡಿಸಿದ್ದಾರೆ.

ಭಾರತ ಜೋಡೋ ಯಾತ್ರೆ ಹಾಗೂ ವಿಧಾನಸಭಾ ಅಧಿವೇಶನ ನಡೆಯುತ್ತಿರುವ ಮಧ್ಯೆಯೇ ಮತ್ತೊಮ್ಮೆ ಇಡಿ ನನಗೆ ಸಮನ್ಸ‌ ನೀಡಿದೆ. ನಾನು ಸಹಕರಿಸಲು ಸಿದ್ಧ ಆದರೆ ಈ ಸಮನ್ಸ‌ ನೀಡಿರುವ ಸಮಯ ಹಾಗೂ ಮೇಲಿಂದ ಮೇಲೆ ನೀಡುತ್ತಿರುವ ಕಿರುಕುಳದಿಂದಾಗಿ ನನ್ನ ಸಾಂವಿಧಾನಿಕ ಮತ್ತು ರಾಜಕೀಯ ಕರ್ತವ್ಯಗಳನ್ನು ನಿರ್ವಹಿಸಲು ತೊಂದರೆಯಾಗುತ್ತಿದೆ ಎಂದು ಈ ಬಗ್ಗೆ ಟ್ವೀಟ್ ಮಾಡಿರುವ ಡಿ.ಕೆ.ಶಿವಕುಮಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Share This Article