ನನಗೆ ನ್ಯಾಯ ಸಿಗುತ್ತದೆ : ಯಡಿಯೂರಪ್ಪ 

khushihost
ನನಗೆ ನ್ಯಾಯ ಸಿಗುತ್ತದೆ : ಯಡಿಯೂರಪ್ಪ 

ಬೆಂಗಳೂರು: ಬಿಡಿಎ ವಸತಿ ಯೋಜನೆ ಕಾಮಗಾರಿಗೆ ಗುತ್ತಿಗೆ ನೀಡಲು ಲಂಚ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಎಫ್ ಐಆರ್ ದಾಖಲಾದ ಕುರಿತು ನಗರದಲ್ಲಿ ಮಾತನಾಡಿದ ಬಿ. ಎಸ್ ಯಡಿಯೂರಪ್ಪ ಅವರು, ನನಗೆ ನ್ಯಾಯಾಂಗದ ಮೇಲೆ ತುಂಬಾ ವಿಶ್ವಾಸವಿದೆ. ಆದರೆ ನಾನು ಏನು ತಪ್ಪು ಮಾಡಿಲ್ಲ. ಹೀಗಾಗಿ ನನಗೆ ನ್ಯಾಯ ಸಿಗುತ್ತದೆ ಎಂಬ ವಿಶ್ವಾಸವಿದೆ ಎಂದು ಹೇಳಿದ್ದಾರೆ.

ಲಂಚ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಅವರ ಪುತ್ರ ವಿಜಯೇಂದ್ರ ಹಾಗೂ ಸಚಿವ ಸೋಮಶೇಖರ್, ಶಶಿಧರ ಮುರಳಿ, ಸಂಜಯ್ ಶ್ರೀ, ಚಂದ್ರಕಾಂತ ರಾಮಲಿಂಗಂ ಹಾಗೂ ವಿರೂಪಾಕ್ಷಪ್ಪ ಯಮಕನಮರಡಿ ವಿರುದ್ಧ ಲೋಕಾಯುಕ್ತ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ.

Share This Article