ಮೀಸಲಾತಿಗಾಗಿ ಮುಖ್ಯಮಂತ್ರಿಗಳ ಮನೆ ಮುಂದೆ ಒಂದು ಲಕ್ಷ ಪಂಚಮಸಾಲಿಗರ ಧರಣಿ  

khushihost
ಮೀಸಲಾತಿಗಾಗಿ ಮುಖ್ಯಮಂತ್ರಿಗಳ ಮನೆ ಮುಂದೆ ಒಂದು ಲಕ್ಷ ಪಂಚಮಸಾಲಿಗರ ಧರಣಿ  

ಹುಬ್ಬಳ್ಳಿ : ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗಾಗಿ ಆಗ್ರಹಿಸಿ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿವಾಸದ ಬಳಿ ಬೃಹತ್ ಧರಣಿ ನಡೆಸಲಾಗುವುದು ಎಂದು ಪಂಚಮಸಾಲಿ ಸಮಾಜದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶ್ರೀಗಳು, ಲಿಂಗಾಯತ ಪಂಚಮಸಾಲಿ ಸಮಾಜದ ಹೋರಾಟದ ಗಡವಿಗೆ ಸರ್ಕಾರ ಮಾತು ತಪ್ಪಿದೆ. ಈ ಹಿನ್ನಲೆಯಲ್ಲಿ ಮೀಸಲಾತಿಗಾಗಿ ಆಗ್ರಹಿಸಿ ಬೊಮ್ಮಾಯಿ ಅವರ ಹಾವೇರಿ ಜಿಲ್ಲೆಯ ಶಿಗ್ಗಾವಿಯಲ್ಲಿರುವ ಅವರ ಮನೆ ಮುಂದೆ ಬೃಹತ್ ಧರಣಿ ಸತ್ಯಾಗ್ರಹ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಶಿಗ್ಗಾಂವದ ಚೆನ್ನಮ್ಮನ ವೃತ್ತದಿಂದ ರ್ಯಾಲಿ ಮೂಲಕ ಒಂದು ಲಕ್ಷ ಪಂಚಮಸಾಲಿಗರೊಂದಿಗೆ ಮುಖ್ಯಮಂತ್ರಿಗಳ ಮನೆ ಮುಂದೆ ಸತ್ಯಾಗ್ರಹ ಹಮ್ಮಿಕೊಳ್ಳಲಾಗುವುದು.

ಮುಖ್ಯಮಂತ್ರಿಗಳು ನಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ಅಕ್ಟೊಬರ್ ಹಾಗೂ ನವೆಂಬರ್ ತಿಂಗಳಿನಲ್ಲಿ 25 ಲಕ್ಷ ಪಂಚಮಸಾಲಿಗರೊಂದಿಗೆ ಬೆಂಗಳೂರಿನಲ್ಲಿ ಬೃಹತ್ ಶಕ್ತಿ ಪ್ರದರ್ಶನ ಮಾಡುವ ಮೂಲಕ ಮೀಸಲಾತಿಯ ಹಕ್ಕನ್ನು ನಾವು ಪಡೆದುಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.

Share This Article