ಸಿಲಿಂಡರ್ ಸ್ಫೋಟಗೊಂಡು ಮನೆಗೆ ಹಾನಿ;ಪ್ರಾಣಾಪಾಯದಿಂದ ಪಾರಾದ ಕುಟುಂಬ

khushihost
ಸಿಲಿಂಡರ್ ಸ್ಫೋಟಗೊಂಡು ಮನೆಗೆ ಹಾನಿ;ಪ್ರಾಣಾಪಾಯದಿಂದ ಪಾರಾದ ಕುಟುಂಬ

ಹುಕ್ಕೇರಿ: ಸಿಲಿಂಡರ್ ಸ್ಫೋಟ ಆಗಿ ಅಪಾರ ಪ್ರಮಾಣದ ಹಾನಿಯಾದ ಘಟನೆ ತಾಲೂಕಿನ ಕರಗುಪ್ಪಿ ಯಲ್ಲಾಪುರ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಗೌಡ್ರ ಓಣಿಯ ಅಲಗೌಡ ಅಪ್ಪರಾಯಗೌಡ ಪಾಟೀಲ ಎಂಬ ರೈತನ ಮನೆಯಲ್ಲಿ ಸಿಲಿಂಡರ್ ಸ್ಫೋಟವಾಗಿದ್ದು, ಅಡುಗೆ ಮಾಡಲು ಓಲೆಯ ಮೇಲೆ ಇಟ್ಟು ಹೊರಗಡೆ ಹೋದ ಸಂದರ್ಭದಲ್ಲಿ ಸಿಲಿಂಡರ್ ಗ್ಯಾಸ್ ಲೀಕ್ ಆಗಿ ದುರಂತ ಸಂಭವಿಸಿದೆ.

ಶೇ. 50 % ಮನೆ ಸಂಪೂರ್ಣ ಹಾನಿಯಾಗಿದೆ. ಯಾವುದೇ ಪ್ರಾಣಹಾನಿ ಆಗಿಲ್ಲ ಎಂದು ತಿಳಿದು ಬಂದಿದೆ.

Share This Article