ಎಪಿಎಂಸಿ ಕಾಯ್ದೆ ರದ್ದು ಇಲ್ಲ : ಸಚಿವ ಸೋಮಶೇಖರ 

khushihost
ಎಪಿಎಂಸಿ ಕಾಯ್ದೆ ರದ್ದು ಇಲ್ಲ : ಸಚಿವ ಸೋಮಶೇಖರ 

ಬೆಂಗಳೂರು : ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಜಾರಿ ಆಗಿರುವ ಎಪಿಎಂಸಿ ಕಾಯ್ದೆ ರದ್ದು ಮಾಡುವುದಿಲ್ಲ ಎಂದು ಸಹಕಾರ ಸಚಿವ ಎಸ್‌.ಟಿ ಸೋಮಶೇಖರ ಹೇಳಿದ್ದಾರೆ.

ವಿಧಾನ ಪರಿಷತ್ ಕಲಾಪದ ಪ್ರಶ್ನೋತ್ತರ ಅವಧಿಯಲ್ಲಿ ಉತ್ತರಿಸಿದ ಅವರು, ಯಾವ ರೈತರೂ ಎಪಿಎಂಸಿ ಕಾಯ್ದೆ ವಾಪಸ್‌ ಪಡೆಯುವಂತೆ ಮನವಿ ಮಾಡಿಲ್ಲ. ಹಾಗಾಗಿ ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಜಾರಿ ಆಗಿರುವ ಎಪಿಎಂಸಿ ಕಾಯ್ದೆ ರದ್ದು ಮಾಡುವುದಿಲ್ಲ ಎಂದರು.

ಅಲ್ಲದೇ ಅಕ್ಟೋಬರ 2 ರಿಂದ ಜಾರಿ ಯಶಸ್ವಿನಿ ಯೋಜನೆಯಾಗಲಿದೆ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ ತಿಳಿಸಿದ್ದಾರೆ.

ಅವರು ಇಂದು ವಿಧಾನ ಪರಿಷತ್ ನಲ್ಲಿ ಈ ಬಗ್ಗೆ ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್ ಸದಸ್ಯ ಮಧು ಮಾದೇಗೌಡರ ಪ್ರಶ್ನೆಗೆ ಉತ್ತರಿಸಿದರು.

 

Share This Article