ಮಕ್ಕಳ ಕಳ್ಳರೆಂದು ಇಬ್ಬರು ಮಹಿಳೆಯರನ್ನು ಥಳಿಸಿದ ಜನ

khushihost
ಮಕ್ಕಳ ಕಳ್ಳರೆಂದು ಇಬ್ಬರು ಮಹಿಳೆಯರನ್ನು ಥಳಿಸಿದ ಜನ

ಕಲಬುರಗಿ : ಮಕ್ಕಳ ಕಳ್ಳರ ಸುಳ್ಳು ವದಂತಿ ಸಾಮಾಜಿಕ ಜಾಲತಾಣಗಳ ಮೂಲಕ ಹಬ್ಬಿಸಿರುವ ಕಾರಣ ಅಮಾಯಕ ಬಡಪಾಯಿಗಳೇ ಇದಕ್ಕೆ ಬಲಿಯಾಗುತ್ತಿದ್ದಾರೆ. ತಮ್ಮ ಸಂಬಂಧಿಕರ ಮನೆಗೆ ಬಂದಿದ್ದ ಇಬ್ಬರು ಮಹಿಳೆಯರನ್ನು ಜನರು ಥಳಿಸಿದ ಘಟನೆ ಜಿಲ್ಲೆಯ ಚಿಂಚೋಳಿ ತಾಲೂಕಿನ ಪೋಲಕಪಳ್ಳಿ ಗ್ರಾಮದಲ್ಲಿ ನಡೆದಿದೆ.

ತೆಲಂಗಾಣದ ಕೊತ್ಲಾಪುರದಿಂದ ಇಬ್ಬರು ಮಹಿಳೆಯರು ಪೋಲಕಪಳ್ಳಿ ಗ್ರಾಮಕ್ಕೆ ಆಗಮಿಸಿದ್ದರು. ಈ ವೇಳೆ ಅವರನ್ನು ನೋಡಿ ಅನುಮಾನಿಸಿದ ಜನರು ಮಕ್ಕಳ ಕಳ್ಳರೆಂದು ಭಾವಿಸಿ ಥಳಿಸಿದ್ದಾರೆ.

ಮಹಿಳೆಯರನ್ನು ಥಳಿಸಿದ ಗ್ರಾಮಸ್ಥರು ಬಳಿಕ ಮಹಿಳೆಯರನ್ನು ಚಿಂಚೋಳಿ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ. ಬಳಿಕ ವಿಚಾರಣೆ ನಡೆಸಿದ ಪೊಲೀಸರು ಮಹಿಳೆಯರು ಸಂಬಂಧಿಕರ ಮನೆಗೆ ಬಂದಿರುವುದು ಎಂದು ತಿಳಿದು ಬಂದಿದೆ.

Share This Article