ಸವದತ್ತಿ; ಭೀಕರ ಅಪಘಾತ : ಎಎಸ್​ಐ ಪತ್ನಿ ಸೇರಿದಂತೆ ನಾಲ್ವರ ಸಾವು

khushihost
ಸವದತ್ತಿ; ಭೀಕರ ಅಪಘಾತ : ಎಎಸ್​ಐ ಪತ್ನಿ ಸೇರಿದಂತೆ ನಾಲ್ವರ ಸಾವು

ಸವದತ್ತಿ: ಕಾರು ಮತ್ತು ಬೈಕ್​ಗೆ ಲಾರಿ ಢಿಕ್ಕಿ ಹೊಡೆದ ಪರಿಣಾಮ ಎಎಸ್​ಐ ಪತ್ನಿ ಸೇರಿದಂತೆ ನಾಲ್ವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಸವದತ್ತಿ ತಾಲೂಕಿನ ಬೂದಿಗೊಪ್ಪ ಕ್ರಾಸ್​ನಲ್ಲಿ ನಡೆದಿದೆ.

ರುಕ್ಮಿಣಿ ಹಳಕಿ(48) ಅಕ್ಷತಾ ಹಳಕಿ(22), ಕಾರು ಚಾಲಕ ನಿಖಿಲ ಕದಂ(24), ಬೈಕ್​ನಲ್ಲಿದ್ದ ವೃದ್ಧೆ ಹನುಮವ್ವಾ ಚಿಕ್ಕಲಕಟ್ಟಿ ಮೃತ ದುರ್ದೈವಿಗಳು. ಕುಡಚಿ ಪೊಲೀಸ್​ ಠಾಣೆಯ ಎಎಸ್​ಐ ವೈ.ಎಂ.ಹಲಕಿರವರ ಪತ್ನಿ ರುಕ್ಮಿಣಿ ಸಾವನ್ನಪ್ಪಿದ್ದಾರೆ.

ಬೆಳಗಾವಿ-ಬಾಗಲಕೋಟ ರಸ್ತೆಯ ಬೂದಿಗೊಪ್ಪ ಕ್ರಾಸ್​ನಲ್ಲಿ ಸಿಮೆಂಟ್ ಸಾಗಿಸುತ್ತಿದ್ದ ಲಾರಿ ಬೆಳಗಾವಿಯತ್ತ ಬರುತ್ತಿತ್ತು.ಈ ವೇಳೆ ಸ್ವಿಫ್ಟ್ ಡಿಸೈರ್ ಕಾರು ಮತ್ತು ಬೈಕ್​ಗೆ ಅದು ಢಿಕ್ಕಿ ಹೊಡೆದಿದೆ.

ಸ್ವಿಫ್ಟ್​ ಕಾರಿನಲ್ಲಿದ್ದ ಮೂವರು, ಬೈಕ್​ನಲ್ಲಿದ್ದ ವೃದ್ಧೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಮೂವರಿಗೆ ಗಂಭೀರ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ಎಸ್‌ಪಿ ಡಾ.ಸಂಜೀವ ಪಾಟೀಲ ಅವರು ಭೇಟಿ ನೀಡಿದ್ದಾರೆ. ಮುರಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share This Article