545 ಪಿಎಸ್‌ಐ ಹುದ್ದೆಗಳ ಮರುಪರೀಕ್ಷೆಗೆ ಹೈಕೋರ್ಟ್ ಮಧ್ಯಂತರ ತಡೆ 

khushihost
545 ಪಿಎಸ್‌ಐ ಹುದ್ದೆಗಳ ಮರುಪರೀಕ್ಷೆಗೆ ಹೈಕೋರ್ಟ್ ಮಧ್ಯಂತರ ತಡೆ 

ಬೆಂಗಳೂರು : 545 ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಹಿನ್ನೆಲೆಯಲ್ಲಿ ಮರು ಪರೀಕ್ಷೆ ನಡೆಸಲು ಹೈಕೋರ್ಟ ಮಧ್ಯಂತರ ತಡೆ ನೀಡಿದೆ.

ಮುಂದಿನ ಆದೇಶದವರೆಗೆ ಪಿಎಸ್‌ಐ ಮರುಪರೀಕ್ಷೆ ದಿನಾಂಕ ಪ್ರಕಟಿಸಬಾರದು ಹೈಕೋರ್ಟ್ ವಿಭಾಗೀಯ ಪೀಠ ಮಧ್ಯಂತರ ಆದೇಶ ಹೊರಡಿಸಿದೆ. ಮರುಪರೀಕ್ಷೆ ರದ್ದು ಕೋರಿ ಹಲವು ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದರು. ಈ ಹಿನ್ನೆಲೆ ಕೋರ್ಟ್ ಆದೇಶ ಹೊರಡಿಸಿದೆ.

ಆರೋಪಿಗಳ ಮೇಲೆ ತನಿಖೆ ನಡೆಸಲಾಗುತ್ತಿದೆ. ಈ ಪ್ರಕರಣದಲ್ಲಿ ದಿನೇ ದಿನೇ ಅಕ್ರಮದಲ್ಲಿ ಪಾಲ್ಗೊಂಡವರ ಸಂಖ್ಯೆ ಹೆಚ್ಚಾಗೆ ಸಿಐಡಿ ತನಿಖೆಯಿಂದ ಹೊರಬೀಳುತ್ತಿದೆ.

ಈ ಹಿಂದೆ ಗೃಹ ಸಚಿವ ಆರಗ ಜ್ಞಾನೇಂದ್ರ ರವರು ಮರುಪರೀಕ್ಷೆಗೆ ದಿನಾಂಕವನ್ನು ಶೀಘ್ರದಲ್ಲೇ ನಿಗದಿಮಾಡಿ, ಪ್ರಕಟಿಸಲಾಗುವುದು ಎಂದು ಹೇಳಿದ್ದರು.

Share This Article