ಕೊಹ್ಲಿ ಪ್ರತಿ ಇನಸ್ಟಾಗ್ರಾಂ ಪೋಸ್ಟಗೆ 8 ಕೋಟಿ ರೂ.

khushihost
ಕೊಹ್ಲಿ ಪ್ರತಿ ಇನಸ್ಟಾಗ್ರಾಂ ಪೋಸ್ಟಗೆ 8 ಕೋಟಿ ರೂ.

ಹೊಸದಿಲ್ಲಿ: ಭಾರತದ ಕ್ರಿಕೆಟ್ ತಾರೆ ವಿರಾಟ​ ಕೊಹ್ಲಿ ಅವರು ಸಾಮಾಜಿಕ ಜಾಲತಾಣ ಇನ​ಸ್ಟಾಗ್ರಾಂನಲ್ಲೂ ಹೊಸ ದಾಖಲೆ ಬರೆದಿದ್ದಾರೆ. ಇನಸ್ಟಾಗ್ರಾಮನಲ್ಲಿ ಅವರು ಪ್ರತಿ ಪ್ರಾಯೋಜಿತ ಪೋಸ್ಟ್​ಗೆ 8 ಕೋಟಿ ರೂಪಾಯಿ ಚಾರ್ಜ​ ಮಾಡುತ್ತಿದ್ದಾರೆ.

ಈ ಮೂಲಕ ಇನ್​ಸ್ಟಾಗ್ರಾಂನಲ್ಲಿ ಗರಿಷ್ಠ ಹಣ ಸಂಪಾದನೆ ಮಾಡುವ ವಿಶ್ವದ ಅಗ್ರ 15 ಸೆಲೆಬ್ರಿಟಿಗಳಲ್ಲಿ ಕೊಹ್ಲಿ ಸಹ ಒಬ್ಬರು ಎನ್ನಿಸಿದ್ದಾರೆ.

ಕೊಹ್ಲಿ ಅವರು ಇನ್​ಸ್ಟಾಗ್ರಾಂನಲ್ಲಿ 21 ಕೋಟಿಗೂ ಅಧಿಕ ಹಿಂಬಾಲಕರನ್ನು ಹೊಂದಿದ್ದಾರೆ. ಹೋಪರ್​ ಎಚ್​ಕ್ಯೂ ಬಿಡುಗಡೆ ಮಾಡಿರುವ ಅಂಕಿ ಅಂಶಗಳ ಪ್ರಕಾರ, ಕ್ರಿಶ್ಚಿಯಾನೊ ರೊನಾಲ್ಡೊ ವಿಶ್ವದಲ್ಲೇ ಅಗ್ರಸ್ಥಾನದಲ್ಲಿದ್ದಾರೆ. ಅವರು ಪ್ರತಿ ಪ್ರಾಯೋಜಿತ ಪೋಸ್ಟ್​ಗೆ 19.5 ಕೋಟಿ ರೂ. ಪಡೆಯುತ್ತಾರೆ. ವಿರಾಟ​ ಕೊಹ್ಲಿ ಈ ಪಟ್ಟಿಯಲ್ಲಿರುವ ಅಗ್ರ ಭಾರತೀಯ ಕ್ರಿಕೆಟಿಗರಾಗಿದ್ದಾರೆ.

Share This Article