ಕಾಂಗ್ರೆಸ್​ ಅಧ್ಯಕ್ಷ ಸ್ಥಾನಕ್ಕೆ ಮಲ್ಲಿಕಾರ್ಜುನ ಖರ್ಗೆ ನಾಮಪತ್ರ

khushihost
ಕಾಂಗ್ರೆಸ್​ ಅಧ್ಯಕ್ಷ ಸ್ಥಾನಕ್ಕೆ ಮಲ್ಲಿಕಾರ್ಜುನ ಖರ್ಗೆ ನಾಮಪತ್ರ

ನವದೆಹಲಿ: ಕಾಂಗ್ರೆಸ್​ ಅಧ್ಯಕ್ಷ ಸ್ಥಾನಕ್ಕೆ ಮಲ್ಲಿಕಾರ್ಜುನ ಖರ್ಗೆ ನಾಮಪತ್ರವನ್ನು ಸಲ್ಲಿಸಿದ್ದಾರೆ. ನಾಮಪತ್ರ ಹಿಂಪಡೆಯಲು ಅಕ್ಟೋಬರ 8 ಕೊನೆಯ ದಿನವಾಗಿದೆ.

ಇದಕ್ಕೂ ಮುನ್ನ ದೆಹಲಿಯ ಎಐಸಿಸಿ ಕಚೇರಿಗೆ ತೆರಳಿದ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನಾನು ನನ್ನ ನಾಮಪತ್ರವನ್ನು ಸಲ್ಲಿಸಲಿದ್ದೇನೆ ಎಂದು ಹೇಳಿದ್ದಾರೆ.

ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದಾರೆ. ಅಶೋಕ ಗೆಹ್ಲೋಟ, ದಿಗ್ವಿಜಯ ಸಿಂಗ್ ಮತ್ತು ಭೂಪಿಂದರ ಹೂಡಾ ಸೇರಿದಂತೆ ಕಾಂಗ್ರೆಸ್ ನಾಯಕರು ಖರ್ಗೆ ಅವರನ್ನು ಬೆಂಬಲಿಸಿ ಪಕ್ಷದ ಪ್ರಧಾನ ಕಚೇರಿಯಲ್ಲಿ ಹಾಜರಿದ್ದರು.

ಇದಕ್ಕೂ ಮುನ್ನ ಕಾಂಗ್ರೆಸ್ ನಾಯಕ ಶಶಿ ತರೂರ ನಾಮಪತ್ರ ಸಲ್ಲಿಸಿದ್ದರು. ಜಾರ್ಖಂಡ ಕಾಂಗ್ರೆಸ್ ನಾಯಕ ಕೆ.ಎನ್.ತ್ರಿಪಾಠಿ ಕೂಡ ನಾಮಪತ್ರ ಸಲ್ಲಿಸಿದ್ದಾರೆ.

Share This Article