ಟ್ಯಾಂಕರ್ ಸೋರಿಕೆಯಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತಗಳು

khushihost
ಟ್ಯಾಂಕರ್ ಸೋರಿಕೆಯಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತಗಳು

ಬೆಳಗಾವಿ : ಸರಣಿ ಅಪಘಾತ ಸಂಭವಿಸಿ ಓರ್ವ ಸಾವಿಗೀಡಾದ ಘಟನೆ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹಿಟ್ನಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ.

ಇನ್ನು ನಾಲ್ವರಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ. ಎರಡು ಕಾರುಗಳು, ಟ್ರಕ್ ಹಾಗೂ 4 ಕ್ಕೂ ಹೆಚ್ಚು ಬೈಕ್ ಗಳ ನಡುವೆ ಸರಣಿ ಅಪಘಾತ ಸಂಭವಿಸಿದೆ.

ಟ್ಯಾಂಕರ್ ನಿಂದ ಮೊಲ್ಯಾಸೀಸ್ ಸೋರಿಕೆ ಹಿನ್ನಲೆ ವಾಹನಗಳು ಸ್ಕಿಡ್ ಆಗಿ ಸರಣಿ ಅಪಘಾತ ಸಂಭವಿಸಿದೆ. ಹಲವಾರು ವಾಹನಗಳು ಜಖಂ ಆಗಿವೆ ಎಂದು ಹೇಳಲಾಗುತ್ತಿದೆ. ಸ್ಥಳಕ್ಕೆ ಹುಕ್ಕೇರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share This Article