ಸರ್ಕಾರಿ ನೌಕರರ ತುಟ್ಟಿ ಭತ್ಯೆ ಹೆಚ್ಚಳ 

khushihost
ಸರ್ಕಾರಿ ನೌಕರರ ತುಟ್ಟಿ ಭತ್ಯೆ ಹೆಚ್ಚಳ 

ಬೆಂಗಳೂರು: ಸರ್ಕಾರಿ ನೌಕರರ ತುಟ್ಟಿ ಭತ್ಯೆ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಟ್ವಿಟ್ಟರ್​ ಮೂಲಕ ಮಾಹಿತಿ ನೀಡಿದ್ದಾರೆ.

ಕರ್ನಾಟಕ ಸರ್ಕಾರಿ ನೌಕರರು ಹಾಗೂ ನಿವೃತ್ತ ನೌಕರರ ತುಟ್ಟಿ ಭತ್ಯೆಯನ್ನು ಜುಲೈ 1 2022ರಿಂದ ಅನ್ವಯವಾಗುವಂತೆ 3.75% ನಷ್ಟು ಹೆಚ್ಚಿಸಿಲು ಸರ್ಕಾರ ಅನುಮೋದಿಸಿದೆ.

ಇದಕ್ಕಾಗಿ ಸರ್ಕಾರ ಹೆಚ್ಚುವರಿಯಾಗಿ ರೂ 1,282.72 ಕೋಟಿ ರೂ. ಭರಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.

Share This Article