ಹೊತ್ತಿ ಉರಿದ ಬಸ್ : 14 ಮಂದಿ ಸಜೀವ ದಹನ

khushihost
ಹೊತ್ತಿ ಉರಿದ ಬಸ್ : 14 ಮಂದಿ ಸಜೀವ ದಹನ

ನಾಸಿಕ: ಚಲಿಸುತ್ತಿದ್ದ ಬಸ್ ಹೊತ್ತಿ ಉರಿದು 14 ಪ್ರಯಾಣಿಕರು ಸಜೀವ ದಹನವಾಗಿರುವ ಘಟನೆ ಮಹಾರಾಷ್ಟ್ರದ ನಾಸಿಕ ಬಳಿ ದುರ್ಘಟನೆಯೊಂದು ನಡೆದಿದೆ.

ಘಟನೆಯಲ್ಲಿ 21 ಜನರಿಗೆ ಗಾಯಗಳಾಗಿದ್ದು ನಾಸಿಕ​​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶನಿವಾರ ಮುಂಜಾನೆ ಬಸ್ ಟ್ರಕ್‌ಗೆ ಢಿಕ್ಕಿ ಹೊಡೆದು ಬಸ್​ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಪರಿಸ್ಥಿತಿ ನಿಯಂತ್ರಿಸುವ ಮುನ್ನವೇ ಬಸ್​ನಲ್ಲಿದ್ದ 14 ಮಂದಿ ಸಾವನ್ನಪ್ಪಿದ್ದು, 21 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಔರಂಗಾಬಾದ ರಸ್ತೆಯಲ್ಲಿ ಮುಂಜಾನೆ 5 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಖಾಸಗಿ ಸ್ಲೀಪರ್ ಕೋಚ್ ಬಸ್​ನಲ್ಲಿ ಸುಮಾರು 30 ಮಂದಿ ಪ್ರಯಾಣಿಕರಿದ್ದರು ಎಂದು ತಿಳಿದು ಬಂದಿದೆ. ನಂದೂರ್ ನಾಕಾದಲ್ಲಿ ಟ್ರಕ್‌ಗೆ ಡಿಕ್ಕಿ ಹೊಡೆದು ಕೆಲವೇ ನಿಮಿಷಗಳಲ್ಲಿ ಬೆಂಕಿ ಹೊತ್ತಿಕೊಂಡಿತು. ಸದ್ಯ ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಗಾಯಾಳುಗಳ ಎಲ್ಲಾ ಚಿಕಿತ್ಸಾ ವೆಚ್ಚವನ್ನು ರಾಜ್ಯ ಸರ್ಕಾರ ಭರಿಸಲಿದೆ ಎಂದು ಸಚಿವ ದಾದಾ ಭೂಸೆ ಹೇಳಿದ್ದಾರೆ.

Share This Article